ತಂದೆ ಮಗ

ಸನಗಿನ ವ್ಯಾಪಾರಮಾಡುವುದರಲ್ಲಿಯೇ ಮುದುಕನಾದ ಶಿವಲಿಂಗಪ್ಪನು, ಕೈಗೆ ಬಂದ ಮಗನಿಗೆ ತನ್ನ ವ್ಯಾಪಾರದ ಹಾಗು ತನ್ನ ಗಿರಾಕಿಗಳ ಪರಿಚಯ ಮಾಡಿಸಿಕೊಟ್ಟರೆ ತಾನು ಕೆಲಸದಿಂದ ನಿವೃತ್ತನಾಗುವುದಕ್ಕೆ ನಿಶ್ಚಿಂತವಾಗುವುದೆಂದು ಆಲೋಚಿಸಿ, ಮಗನನ್ನು ಕರೆದು ತನ್ನ ವಿಚಾರವನ್ನು ಆತನ ಮುಂದೆ ವಿವರಿಸಿದನು. ಮಗನೂ ಅದಕ್ಕೆ ಸಮ್ಮತಿಸಿದನು.

ಕುದುರೆಯ ಮೇಲೆ ಸೀರೆಯ ಗಂಟುಗಳನ್ನು ಹೇರಿ, ನಾಲ್ಕು ದಿನ ಸಾಕಾಗುವಷ್ಟು ರೊಟ್ಟಿ – ಬುತ್ತಿ ಕಟ್ಟಿಕೊಂಡು ತಂದೆಯು ಮಗನೊಂದಿಗೆ ವ್ಯಾಪಾರಕ್ಕೆಂದು ತನ್ನ ದೂರದ ಹಳ್ಳಿಗಳತ್ತ ಹೊರಟನು. ಸರತಿ ಪ್ರಕಾರ ತಂದೆ-ಮಗ ಕುದುರೆ ಹತ್ತುತ್ತಿದ್ದರು. ಕುದುರೆ ತನ್ನದೇ ಆದ ವೇಗದಲ್ಲಿ ಸಾಗಬಹುದಾದರೂ ಅದರ ಬೆನ್ನ ಹಿಂದೆ ನಡೆಯುತ್ತ ಹೊರಟವರ ಸಲುವಾಗಿ ಮಂದವೇಗದಿಂದ ನಡೆಯಿತು. ಆ ಕಾರಣದಿಂದ ಅವರು ತಲಪಬೇಕಾದ ಹಳ್ಳಿಯನ್ನು ಸಾಯಂಕಾಲದೊಳಗಾಗಿ ತಲುಪಲು ಸಾಧ್ಯವಾಗಲಿಲ್ಲ. ಆ ಹಳ್ಳಿ ಇನ್ನೂ ಎರಡು ಹರದಾರಿ ದೂರವಿರುವಾಗಲೇ ಹೊತ್ತು ಮುಳುಗಿ ದೀಪಹಚ್ಚುವ ವೇಳೆಯಾಯಿತು. ತುಸು ರಾತ್ರಿಯಾದರೂ ಚಿಂತೆಯಿಲ್ಲ, ಹೋಗಿಯೇ ಬಿಡೋಣ ಎಂದು ಮಗ, ಇದೇ ಹಳ್ಳಿಯಲ್ಲಿ ರಾತ್ರಿ ಕಳೆದು ಮುಂಜಾನೆ ಹೋಗೋಣ ಎಂದು ತಂದೆ ಯೋಚಿಸತೊಡಗಿದನು.

ಮಗ ಕುದುರೆಯ ಮೇಲೆ ಕುಳಿತಿದ್ದಾನೆ. ತಂದೆ ನಡುವಿಗೆ ಒಲ್ಲಿಸುತ್ತಿ ಹಿಂದೆ ನಡೆದಿದ್ದಾನೆ. ಮುಂದಿನ ಊರ ಹಾದಿ ಹಿಡಿದ ಕುದುರೆಯನ್ನು ಹೊರಳಿಸಿ ಊರ ಅಗಸೆಯತ್ತ ಕರೆದೊಯ್ಯಲು ತಂದೆ ಲಗಾಮು ಹಿಡಿದಿದ್ದಾನೆ. ಮೇಲೆ ಕುಳಿತವನು ಮುಂದಿನ ದಾರಿ ಹಿಡಿಯಲು ತವಕಿಸುತ್ತಿದ್ದಾನೆ. ಆ ಹಳ್ಳಿಯ ಅಗಸೆಯ ಮುಂದೆ ತಂದೆ ಮಕ್ಕಳಲ್ಲಿ ಜಗ್ಗಾಟವೇ ನಡೆಯಿತು. “ನಿನಗೆ ತಿಳಿಯುವದಿಲ್ಲ. ನಾನು ಹೇಳಿದೆಂತೆ ಕೇಳು.” ಎಂಬುದೇ ಅವರಿಬ್ಬರ ಕಟ್ಟಾಜ್ಞೆಯಾಯಿತು. ಆ ಗಲವಿಲಿಗೆ ಹತ್ತೆಂಟುಜನ ನೆರೆಯಿತು ಅವರಲ್ಲೊಬ್ಬ ಕೇಳಿದರು –

“ನೀವು ಒಬ್ಬರಿಗೊಬ್ಬರು ಏನಾಗಬೇಕು ?”
“ತಂದೆ-ಮಗ” ಎಂದು ಮುದುಕನು ಹೇಳಿದೆನು.
“ಸುಳ್ಳು. ನಾನು ಮಾಲಿಕ, ಆತ ಗುಮಾಸ್ತ” ಎಂದವನು ಮಗ.
“ಆ ಹುಡುಗನದೇನು ಕೇಳುವಿರಿ ? ನಾವು ತಂದೆ ಮಕ್ಕಳು.”
“ಆ ಮುದುಕನದೇನು ಕೇಳುವಿರಿ ? ನಾವು ಮಾಲಿಕ – ಗುಮಾಸ್ತ.”
“ಮಗನಾದವನು ತಂದೆಯ ಮಾತು ಕೇಳಬೇಕಲ್ಲವೇ ?” ಎಂಬುದು ಮುದುಕನ ವಾದ.
“ಗುಮಾಸ್ತನಾದವನು ಮಾಲಿಕನು ಹೇಳಿದೆಂತೆ ನಡೆಯಬೇಕಲ್ಲವೇ ?” ಎಂಬುದು ಮಗನ ಪ್ರತಿವಾದ.

ಹಗ್ಗವೂ ಹರಿಯದೆ ಕೋಲೂ ಮುರಿಯದೆ ವಾದವಿವಾದವು ಸಾಗಿದ ಬಳಿಕ, ಊರವರು ಅವರ ಕುದುರೆಯನ್ನು ಜಗ್ಗಿಕೊಂಡು ಚಾವಡಿಗೊಯ್ದರು. ಗೌಡನು ಅವರ ವಾದ-ಪ್ರತಿವಾದಗಳನ್ನು ಕೇಳಿ, ಮುಂದಿನ ಯೋಚನೆ ಹೇಳಿದನು – “ನೀವು ತಂದೆಮಕ್ಕಳೋ ಮಾಲಿಕ ಗುಮಾಸ್ತರೋ ಸ್ಪಷ್ಟವಾಗುವವರೆಗೆ ನಿಮ್ಮನ್ನು ಇಲ್ಲಿಂದ ಬಿಡುವುದೇ ಇಲ್ಲ. ನಿಮ್ಮೂರಿನ ಗ್ರಾಮಸ್ಥರಿಂದ ನಿಮ್ಮ ಹತ್ತಗಡೆಯ ವಿಷಯವನ್ನು ತರಿಸಿಕೊಡಿರಿ.”

ಮರುದಿನ ಗೌಡನು ಓಲೆಕಾರನನ್ನು ಅವರೂರಿಗೆ ಕಳಿಸಿ ಅವರ ವಿಷಯವನ್ನು ತರಿಸಿಕೊಂಡರೆ ತಂದೆ-ಮಗ ಎನ್ನುವುದು ತಿಳಿಯಿತು. ಶಿವಲಿಂಗಪ್ಪನಿಂದ ಓಲೆಕಾರನಿಗೆ ಎರಡು ರೂಪಾಯಿ ಕೊಡಿಸಿ, ಮಗನಿಗೆ ಬುದ್ಧಿಹೇಳಿ ಅವರನ್ನು ಮುಂದಿನೂರಿಗೆ ಹೋಗಗೊಟ್ಟನು.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೮೩
Next post ಕಲ್ಲು ಮಣ್ಣು

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…