ಕೊನೆಯಾಶೆ

ಹೊಲಮನೆ, ಬೆಳ್ಳಿ ಬಂಗಾರ ಸಾಕಷ್ಟು ಗಳಿಸಿದ ಒಬ್ಬ ದೈವುಳ್ಳ ಗೃಹಸ್ಥನು ಕಾಯಿಲೆಯಿಂದ ಹಾಸಿಗೆ ಹಿಡಿದನು. ಆ ಗೃಹಸ್ಥನು ಸಾಧ್ಯವಾದ ಸೌಮ್ಯೋಪಾಯಗಳಿಂದ ತನ್ನ ಕಾಯಿಲೆ ಕಳಕೊಳ್ಳುವ ಎತ್ತುಗಡೆ ನಡೆಸಿದನು. ಅದಕ್ಕನುಗುಣವಾದ ಔಷಧಿ-ಚಿಕಿತ್ಸೆಗಳನ್ನು ಅನುಸರಿಸಬೇಕಾಯಿತು.

ಸೌಮ್ಯವಾದ ಔಷಧಿ-ಚಿಕಿತ್ಸೆಗಳಿಗೆ ಹಣಿಯದೆ ಕಾಯಿಲೆಯು ದಿನದಿನಕ್ಕೆ ಅಸಾಧ್ಯವಾಗುತ್ತಲೇ ಬಂದಿತು. ಯಜಮಾನನು ಬಿದ್ದಲ್ಲಿಯೇ ಬಿದ್ದುಕೊಳ್ಳುವ ಸ್ಥಿತಿಯು ಪ್ರಾಪ್ತವಾಯಿತು. ಮಾತನಾಡುವುದಕ್ಕೆ ತ್ರಾಣವಿಲ್ಲದಂತಾಯಿತು. ಕೊನೆಗೆ ಮಾತೂ ನಿಂತುಹೋದವು. ಸನ್ನೆಯಿಂದಲೇ ಹೇಳಲು ಕೇಳಲು ತೊಡಗಿದರು. ತಂದೆಯ ದುರವಸ್ಥೆ ಕಂಡು, ಮಕ್ಕಳೆಲ್ಲ ಸುತ್ತಲು ನೆರೆದು ಕುಳಿತು – “ನನಗೇನು ಹೇಳುತ್ತೀ” ಎಂದು ಕಣ್ಣೀರು ಸುರಿಸತೊಡಗಿದರು. ತಂದೆಗೆ ಮಾತಾಡಲು ಸಾಧ್ಯವಿರದಿದ್ದರೂ ಸ್ಮೃತಿಯಿತ್ತು. ಆದ್ದರಿಂದ ಕೈಸನ್ನೆಯಿಂದಲೇ ಅವರಿಗೆ ಸಾಂತ್ವನ ಹೇಳಿದನು. ಮರುಕ್ಷಣದಿಂದಲೇ ಬೆರಳಿನಿಂದ ಸೂಚಿಸುತ್ತ ಏನೋ ತೋರಿಸಹತ್ತಿದನು. ಮಕ್ಕಳಿಗೆ ಅನುಮಾನವಾಯಿತು – “ಹುಗಿದಿಟ್ಟ ದ್ರವ್ಯವನ್ನೇ ತೋರಿಸುತ್ತಾನೋ ಏನೋ” ಎಂದು. ತಂದೆಯ ಅಭಿಪ್ರಾಯವನ್ನು ಸರಿಯಾಗಿ ತಿಳಕೊಳ್ಳುವ ಆಸೆಯುಂಟಾಯಿತು ಅವರಿಗೆ. ಅದಕ್ಕೇನು ಮಾಡುವುದು? ಅದೆಷ್ಟು ಹಣ ಖರ್ಚಾದರೂ ಚಿಂತೆಯಿಲ್ಲ. ಒಂದು ಕ್ಷಣದ ಮಟ್ಟಗಾದರೂ ಆತನು ಎದ್ದು ಕುಳಿತು ಮಾತಾಡುವಷ್ಟು ತ್ರಾಣಬರುವಂತೆ ಉಪಾಯ ಮಾಡಲೇಬೇಕೆಂದು ಯೋಚಿಸಿ, ಬಲ್ಲವರ ಬಳಿಗೆ ಓಡಿಹೋಗಿ ಕೇಳಿಕೊಂಡರು.

ನೂರಿನ್ನೂರು ರೂಪಾಯಿ ಖರ್ಚುಮಾಡಿ. ವೈದ್ಯರ ಬಳಿಯಲ್ಲಿರುವ ಒಂದು ಮಾತ್ರೆಯನ್ನು ತಂದು, ತೇದು. ಆಸನ್ನ ಮರಣನಾದ ತಂದೆಯ ನಾಲಗೆಗೆ ಸವರಿದರು. ಅದರ ಪರಿಣಾಮವಾಗಿ ರೋಗಿಯು ಚೇತರಿಸಿಕೊಂಡು ಎದ್ದು ಕುಳಿತನು. ಅಲಕ್ಕನೇ ಸ್ಮರಣಶಕ್ತಿ ಸುಳಿದು ಬಂದಿತು. ಬಾಯಿಗೆ ಮಾತು ಬಂದವು. ಮಕ್ಕಳು ಹಿಗ್ಗಿ ತಂದೆಗೆ ಕೇಳಿದರು – “ಆಗಲೇ ಕೈಮಾಡಿ ಎನೋ ಸೂಚಿಸುತ್ತಿದ್ದೆಯಲ್ಲ ! ಏನು ಹೇಳಬೇಕೆಂದು ಮಾಡಿದ್ದೀ.”

“ಅಹುದೇ ? ಅದೋ. ಈಗ ಸಹ ನೋಡಿರಿ. ಆ ಸುಟ್ಟ ಮುಸಡಿಯ ಎಮ್ಮೆ ಕರುವು ಮೊಂಡ ಕಸಬರಿಗೆ ತಿನ್ನುತ್ತಿದೆ. ಅದನ್ನು ಈಗಲಾದರೂ ಕಸಿದಿಡಿರೋ.”

ಇಷ್ಟು ಹೇಳುವದಕ್ಕೆ ಅವನ ಅವಸಾನ ತೀರಿತು. ನೆಲಕ್ಕರುಳಿದನು. ಬಾಯಲ್ಲಿ ನೀರು ಹನಿಸುವಷ್ಟರಲ್ಲಿ ಪ್ರಾಣಹೋಯಿತು.

ನೂರಿನ್ನೂರು ಖರ್ಚು ಮಾಡಿ ಮಾತ್ರೆ ತಂದು ತೇದುಹಾಕಿದ ಮಕ್ಕಳು ಉಳಿಸಿಕೊಂಡಿದ್ದೇನು ? ಮೊಂಡ ಕಸಬರಿಗೆ ಮಾತ್ರ.
*****

ಪುಸ್ತಕ: ಉತ್ತರ ಕರ್ನಾಟಕದ ಜನಪದ ಕಥೆಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗೆ ಡಂಗುರ – ೯೧
Next post ಜಿಗಳೆಗಳು

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…