Home / ಕವನ / ಕವಿತೆ / ಓ! ವಾಣಿ

ಓ! ವಾಣಿ

ಓ! ವಾಣಿ! ಸರಸಕವಿತಾಶ್ರೇಣಿ, ಅಜನ ಸ-
ಟ್ಟದ ರಾಣಿ, ರಸಿಕ ಜನ ಹೃದ್ವಲ್ಲಕಿಯ ತಂತ್ರಿ-
ಯಂ ಮಿಡಿಸಿ ಮಂದಹಾಸಂಗೈವ ದಿವ್ಯ ವೀ-
ಣಾಪಾಣಿ, ಫಣಿವೇಣಿ, ಶುಭವಾಣಿ ನಮಿಸುವೆಂ
ಭಯ ಭಕ್ತಿಯಿಂದೆಲೌ, ತಾಯೆ, ಶಾರದೆಯೆ, ನೀ-
ನೆನ್ನ ನಾಲಗೆದುದಿಯೊಳಾವಗಂ ಲೀಲೆಯಿಂ
ನರ್ತನಂಗೈದು ಹರಸೌ; ಮಹಾಕಾವ್ಯ ಹೃ-
ತ್ಸರಸಿಯಲ್ಲರಳಿ ಘಮಘಮಿಪ ಕಮಲಿನಿಯ ತುಟಿ
ಜೇನಿನಿನಿಹನಿಯ ನೀಂಟುವ ತುಂಬಿಯಪ್ಪಂತೆ-
ಕೃಪೆಗೈಯ್ಯೆ, ಹೇ ದೇವಿ, ಸಂತಸದ ಸರಿಯ ಸುರಿಸಿ!

ಕವಿಯ ಕೀರ್ತಿಯ ಕಂಡು ಸುರಪತಿಯು ಮರುಳಾದ
ದೇವಾಧಿ ದೇವತೆಗಳೆಲ್ಲರುಂ ಮೂಕ ವಿ-
ಸ್ಮಿತರಪ್ಪರೌ, ಮಾಯೆ, ನಿನ್ನ ನುಡಿಗೆನಿತದ್ಭು-
ತಂ ಶಕ್ತಿ! ದಯೆಗೈಯ್ಯೆ, ಓ! ದೇವಕವಿ ವಂದ್ಯೆಯೇ!
*****
ಬೆಂಗಳೂರು : ೧೯೪೨

Tagged:

Leave a Reply

Your email address will not be published. Required fields are marked *

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...