Home / ಕವನ / ಅನುವಾದ / ದುಃಖಸಮಯ

ದುಃಖಸಮಯ

ಏನು ಲೋಕವೋ! ಏನು ಜನ್ಮವೋ!
ಏನು ಕಾಲವೋ! ಬೇಡವೋ!
ಜೀವಮಾನದ ಕಡೆಯ ಹಂತವ ಹತ್ತಿ ಹಿಂದಕೆ ನೋಡಿ ನಡುಗುವೆ;
ಯಾವ ಕಾಲಕೋ ಮರಳಿ ಬರುವುದು ಆದಿಕಾಲದ ಭೋಗಸಂಪದ?
ಇಲ್ಲವೆಂದಿಗೂ, ಇನ್ನದೆಂದಿಗೂ, ಇಲ್ಲವೋ!
ಇರುಳುಹಗಲೊಳು, ಹರುಷವೆನ್ನೊಳು,
ತೊರೆದೆಹೋಯಿತೋ, ಹೋಯಿತೋ!
ಹೊಸವಸಂತವೂ, ಮೆರೆವ ಶರದವೂ, ಬಿಳಿಯ ಮಂಜಿನೀ ಹಿಮದ ಸಮಯವೂ,
ಕುಸಿದ ಹೃದಯವ ಕೊರಗಿನಿಂದಲೇ ಮಿಡಿವುವಲ್ಲದೇ, ನಲಿವೆನೆಂಬುದೋ
ಇಲ್ಲವೆಂದಿಗೂ ಇನ್ನದೆಂದಿಗೂ, ಇಲ್ಲವೋ!
*****
SHELLEY : A Lament
Tagged:

Leave a Reply

Your email address will not be published. Required fields are marked *

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...