Home / ಕವನ / ಕವಿತೆ / ನಕ್ಷತ್ರಗಳು

ನಕ್ಷತ್ರಗಳು

೧
ನಿಶೀಥ ಕಾಮಿನಿ ಮೆಲ್ಲನೈತರೆ,-
ಸುಶೀತಲಾಮಲ ವಾಯು ಮೋಹಿಸೆ,-
ಅಶೇಷ ಜನ ಮನದಲ್ಲಿಯೊಲವಿನ
ಅಸೀಮ ಲಹರಿಯನುಂಟು ಮಾಡುತ,-
ತಾರಕಾ ಗಣವು
ನಭದಲಿ
ತೋರಿ ಮಿರುಗಿದುವು!

೨
ಸುನೀಲ ಶೂನ್ಯದ ನಭೋ ವಿತಾನದಿ
ಮನೋಹರಾಕೃತಿಯಿಂದ ಮೆರೆಯುವ
ಅನ೦ತ- ಅಗಣಿತ ತಾರಕಾ ಗಣ-
ವನನ್ಯ ಮಾನ್ಯತೆಯಿಂದ ಮಿನುಗುತ್ತ,-
ಶೋಭಿಸುತ್ತಿಹವು!
ಮನವನು
ಮೋಹಿಸುತ್ತಿಹವು!!

೩
ಅಸಂಖ್ಯ ತಾರಾವೃಂದವಂದದಿ
ಸುಸೌಖ್ಯ- ಶಾಂತ- ಗಂಭೀರ- ಮೌನದ
ಸುಸೌಮ್ಯ- ಶುಭ ಸ೦ದೇಶವೊ೦ದನು
ಅಶೇಷ ಮಾನವ ವೃಂದಕುಸುರುತ
ಲೋಕ ನಾಯಕನ
ಲೀಲಾ-
ನೀಕ ವರುಹುವುವು!
*****
೧೯೩೬

Tagged:

Leave a Reply

Your email address will not be published. Required fields are marked *

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...