ಪಂಪ

ಜೈನ ಸಾಮಯಿಕಾದಿಪೌರಾಣವನು ಬರೆದು
ಆದಿಕವಿಯೆನಿಸಿಕೊಂಡಿದ್ದರೂ, ಓ ಪ೦ಪ!
ಸಂಸ್ಕೃತದ ಸಾಹಿತ್ಯದಲ್ಲಿ ಕಾವ್ಯ ವಾಗ್ಗುಂಫ-
ನವ ಮೊತ್ತಮೊದಲೆಸಗಿ, ಆದಿಕವಿಯೆನಿಸಿದ್ದು,
ಜಸವೆತ್ತ ವಾಲ್ಮೀಕಿ ಕಾವ್ಯರ್ಷಿಯಂತೆಮ್ಮ
ಹಳೆಗನ್ನಡದ ಕಾವ್ಯ ಪಂಧಕ್ಕೆ ನೀನಾದಿ-
ಕವಿಯಾಗಿ, ಬಿರುದಿನನ್ವರ್ಥತೆಯನುರೆ ಮೆರೆದಿ!
ಹಾಗೆಯೇ ಲೌಕಿಕದಿ ಆ ಮಹಾ ವಿಕ್ರಮಾ-
ರ್ಜುನ ವಿಜಯವೆಂಬ ವಸ್ತುಕ ಸರ್ಗ ಬಂಧವನು
ತನ್ನ ಪೋಷಕನಾದ ಅರಿ ಕೇಸರೀ ರಾಜ-
ಗಂಕಿತವದನೆ ಮಾಡಿ, ಕಾವ್ಯ ಕರ್ಮದಿ ಸಹಜ-
ಕವಿಯೆನಿಸಿಕೊ೦ಡೆ! ಮಾಚಾಗದಾ ಕರ್ಣನನು
ತೋರಿ, ‘ಕರ್ಣ ರಸಾಯನಂ ಭಾರತಂ’ ಎಂದು
ಅರಿಪಿದೈ,- ಕೌರವನು ಚಲದೋಜನಿಂತೆಂದು!
*****
೧೯೩೮

Tagged:

Leave a Reply

Your email address will not be published. Required fields are marked *

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...

ಗಂಗಮ್ಮನು ಅವಳೊಂದು ಮುತ್ತಿನಂಥಾ ಹೆಣ್ಣು! ಅವಳ ಗೋಳು, ಸಾಯುವಾಗ ಹೊಂದಿದ ಅವಳ ಸಂಕಟದ ಪರಿ, ಎಲ್ಲಾ ನೆನಿಸಿಕೊಂಡರೆ ಆ ಚಿತ್ರವು ಕಣ್ಣೆದಿರಿಗೆ ಈಗಲೂ ಕಟ್ಟಿ ಬಿಡುವುದು. ನಾನೆಷ್ಟೋ ಸಾರೆ ಅವಳು ಇಲ್ಲದಾಗ ಸಿದ್ಧರಾಮನ ದೆಶೆಯಿಂದ ಅವರ ಮನೆಗೆ ಹೋಗುತ್ತಿದ್ದೆ. ಆಗ ನನ್ನನ್ನವಳು ಕರೆದು ಕೂ...

(ಸುಶೀಲೆಯು ಗಂಡನಿಗೆ ಬರೆದ ಕಾಗದ) ಸಿರಿಪುರ ೮-೯-೧೯೨೬ ಮ|| ರಾ|| ಯವರಲ್ಲಿ ಶೀಲ ಮಾಡುವ ವಿಜ್ಞಾಪನೆಗಳು. . . . . . . . . . ನಿಮ್ಮ ಆಕ್ಷೇಪಣೆಯ ಪತ್ರವನ್ನು ಕಂಡು ಮನಸ್ಸಿಗೆ ಕಿರಿಕಿರಿಯಾದರೂ, ನಿಮ್ಮನ್ನು ನಾನು ಪ್ರೀತಿಸುತ್ತೇನಾಗಿ ಈ ಕಾಗದ ಬರೆಯುತ್ತೇನೆ. ಅಲ್ಲ, ನೀವು ಹೆಸರಿಗೆ...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...