Home / ಕವನ / ಕವಿತೆ / ಲಕ್ಷ್ಮೀಶ

ಲಕ್ಷ್ಮೀಶ

‘ಕವಿ ಚೂತ ವನ ಚೈತ್ರ’ ಲಕ್ಷ್ಮೀಶ! ನಿನ್ನ ಮಲ
ವಾರ್ಧಿಕದ ಷಟ್ಪದಿಯ ಝೇಂಕಾರ ಕನ್ನಡದ
ನ೦ದನದೊಳಾನ೦ದ ಮಧುಮಾಸದುತ್ಸವದ

ಸುವಿಲಾಸ ಚೆಲ್ಲಿಹುದು. ವರ ಸಂಸ್ಕೃತದ ಮೂಲ-
ವಾದ ಜೈಮಿನಿ ಮುನಿಯ ಭಾರತವನನುವದಿಸಿ,

ಅದರ ವಿಸ್ತಾರ ಪೌರಾಣ ಕಥನ ಕ್ರಮವ
ಅಲ್ಲಲ್ಲಿ ಸಂಕುಚಿಸಿ, ಪಾತ್ರಕಳೆ, ರಸಭಾವ

ಕೆಡದಂತೆ ಕೃಷ್ಣ ಚರಿತಾಮೃತವಿದೆಂದೆನಿಸಿ-
ಕೊಳ್ವಂತೆ ಕನ್ನಡದ ಜೈಮಿನೀ ಭಾರತವ

ಬರೆದಿರುವೆ- ವೀಣೆಯಿಂ ಗಾನವನು ನುಡಿಪಂತೆ,
ದೇವಪುರ ನಿಲಯ ಲಕ್ಷ್ಮೀರಮಣನೊರೆದಂತೆ
ಜಾನಕಿಯ ವನವಾಸ, ಶಶಿಹಾಸನುರುದೈವ

ಭಕ್ತಿ, ವೀರ ಸುಧನ್ವನಾಖ್ಯಾನ ಮೊದಲಾದ
ವೈಶಿಷ್ಟ್ಯ ಕನ್ನಡದ ರಸಿಕ ಕುಲ ಕಾಮೋದ
*****
೧೯೪೫

Tagged:

Leave a Reply

Your email address will not be published. Required fields are marked *

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...