ಮನಸಿನ ಹರಿದಾಟವನು ನಿಲ್ಲಿಸುವದು
ಘನಕಷ್ಟವೇನೋ ಮನುಜಾ ||ಪ||
ತನುತ್ರಯದೊಳು ಕುಳಿತಾಡುವ ಜೀವನ
ಗಣವರಿಯದ ಮಾರ್ಗಬ್ಯಾರೋ ಮನುಜಾ ||ಅ.ಪ.||
ದಶದಿಕ್ಕಿಗೆ ಹಾರ್ಯಾಡು ಹಕ್ಕಿಗೆ
ಹೊಸಬಲೆ ಹಾಕುವ ಪರಿಬ್ಯಾರೋ
ಗುರುಗೋವಿಂದನ ಚರಣಕಮಲದೊಳು
ಸ್ವರಗೊಂಬ ಭೃಂಗದ ಪರಿಬ್ಯಾರೋ ಮನುಜಾ ||೧||
ವಿಷಯವರಿತು ಸುಖಬಯಸಿ ಬಲು
ಕಸಿವಿಸಿಗೊಂಬುವಿ ಸತತ ಮನಸೆ
ಧರಿಪತಿ ಶಿಶುನಾಳನರಮನಿ ತಿಳಿದರೆ
ಹೊರಒಳಗೊಂದೇ ಪರಿಯಲ್ಲೋ ಮನಸೇ ||೨||
****