ಹೇಸಬಾರದೆ ಮನಸೆ ನೀ ಹೇಸಬಾರದೆ
ಆಸೇದ ನದಿಯೊಳ್ ಈಶ್ಯಾಡುವುದಕೆ ಹೇಸಬಾರದೆ ||ಪ||

ಭೂಮಿಗುದಿಸಿ ಭವದಾ ಮಹಾಕರ್ಮದಿ
ಮರಳಿ ಮಾಯಾ ಮೋಹಕೆ ಮೋಹಿಸದೆ ||೧||

ಏಳು ಜನ್ಮಾತರ ಮೇಳೈಸಿದ ಸುಖ
ತಾಳಿ ಇಳೆಗೆ ಬಂದು ಬಾಳುವುದಕೆ ನೀ ||೨||

ಲೋಕದಿ ಶಿಶುನಾಳಧೀಶನ ಭಜಿಸುತ
ಕಾಕು ವಿಷಯದ ಭೋಗ ಸಾಕು ಸಾಕಿನ್ನೆನ್ನು ||೩||

****