ಬೆಳಗಾಗುವ ತನಕ ಕುಳಿತು ನೋಡೋ
ನಿನ್ನ ತಿಳುವಳಿಕೆ ಜ್ಞಾನವನ್ನು ||ಪ||
ಬಲು ವಿಷಯಗಳಲಿ ಬಳಲಿಸಿ
ತನುತ್ರಯ ವಳಗ ಹೊರಗೆ ಸುಳಿದಾಡುವ ಮನವೇ ||೧||
ಕಣ್ಣು ಮುಚ್ಚಿ ಕೈಕಾಲು
ತಣ್ಣಗೆ ಮಾಡುವ ಕುನ್ನಿ ಮನವೇ ||೨||
ನಿದ್ರೆ ಹತ್ತಿ ಮಲಗಿರ್ದ ಕನಸಿನೊಳು
ಗದ್ದಲಿಸುವ ಮಣಿಗೇಡಿ ಮನವೇ ||೩||
ಘೋರ ಚಿಂತಾತುರದೊಳಗಾಭವ
ಪಾರಗಾಣದೆ ಛಿಮಾರಿ ಮನವೇ ||೪||
ವಸುಧಿಯೊಳು ಶಿಶುನಾಳಧೀಶನ
ವರಯೋಗಕೆ ಸರಿಯಾಗದ ಮನವೇ ||೫||
****
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013