ವನಜಾಕ್ಷಿಯಳೆ ಬಾರೆ ಮನ ಮಾನಿನಿಯೆ ಬಾರೆ
ವನದೊಳಾಡುನು ಕೂಡಿ ಘನ ಹರುಷದಲಿ         ||ಪ||

ತನುವೆಂಬಾ ಕೊಳದೊಳು ಮನವೆಂಬ ತಾವರಿ
ಘನ ಸುಗಂಧವ ಬೀರುತಿರುವದು ನೀರೆ          ||೧||

ನೋಟಾನಿರುತವೆಂಬ ಜೀರ್ಕೊಳಿವಿಯನು ಪಿಡಿದು
ನೀಟಾಗಿ ನೀನು ನೀರಾಟಕ್ಕೆ ಬಾರೆ                 ||೨||

ವಿಷಯವೆಂದೆಂಬುವ ಅಸಮ ಜಲದಿ ಸ್ನಾನಾ
ಯೆಸಗಿ ಶಿಶುನಾಳೇಶನಡಿಗೊಂದಿಸುವುನು           ||೩||

****