ವಂದನೆ ಕಲಿಸಿ ಆನಂದದಿ
ಬಿಂದು ವರ್ಗ ನಿಲಿಸಿ || ಪ ||

ಹೊಂದಿಸಿ ಯಮುನಾತೀರದ ಮಧ್ಯದಲಿ ನಿಂತು
ಎಂದೆಂದಿಗೂ ಯಮದಂದುಗವ ಕಳೆ ಎಂದು || ೧ ||

ಶಿಶುನಾಳಧೀಶನಲ್ಲಿ ಉನ್ಮನಿಯಾಗಿ ಹಸನಾಗಿರುವದು
ವ್ಯಸನಕೆ ವ್ಯಸನಹುದೆ ಕರ್ದುಸಾರನೆಲ್ಲ ಕಳೆಯೆಂದು ಮಂತ್ರದಿ || ೨ ||

****