ಪ್ರಾಯ ಹೋಗುತ ಬಂತು ದೇಹ ಒಣಗಿ ನಿಂತು
ಜೀವದ ಬಡಿವಾರವೇನೆಂಬೆ ||ಪ||

ಕೋವಿಧನಾದರೆ ಸಾವಿಗಂಜದೆ ಆ
ಮಹಾದೇವರ ನುತಿಸಲೆಂಬೆ || ೧ ||

ಆಸ್ತಿ ಚರ್ಮದ ಘಟವಿಸ್ತರಣದಲಿ ಕೂಟ
ಮಸ್ತಕ ಮನ ಬುದ್ಧಿಯೆಂತೆಂಬೆ || ೨ ||

ಮಸ್ತಿ ಮಸ್ತಕರ ಕಾಮ ರಸ್ತೆಯೊಳಿರುವಂತೆ
ಅಸ್ಥಿರ ಮಾತಿದು ಮೊದಲು ಕಾಂಬೆ || ೩ ||

ಶಿಶುನಾಳೇಶನ ಎಸೆವ ಪಾದಕ ನೀನು
ಮುಸುಗು ತೆಗದು ಪೂಜಿಪೊಡಲೇನೆಂಬೆ || ೪ ||

****