ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ
ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ

ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ
ತನ್ನಿರುವನ್ನೇ ಬಯಲುಗೊಳಿಸುವುದೆ ಬನದ ಆಚೆ ಸಾರಿ

ಯಾರು ನುಡಿಸುವರು ಎಲ್ಲೋ ದೂರದಿ ಮತ್ತೆ ಮತ್ತೆ ಕೊಳಲ
ಯಾಕೆ ಮೀಟುವುದು ಆ ದನಿ ಹೀಗೆ ನನ್ನ ಆಳದಳಲ

ತುಂಬಿದ ಜೇನಿನ ಗಡಿಗೆಗೆ ಯಾರೋ ಕಲ್ಲನು ಬೀರಿದರು
ಒಳಗಿನ ಸವಿಯು ಹೊರಗೆ ಹರಿವ ಥರ ತಂತ್ರವ ಹೂಡಿದರು
*****