ಎಂಥಾ ಬೇಗನೆ ಯವ್ವನ ಬಂತೆ ನಿನಗೆ
ನಿಂತು ನೋಡಿ ಹೋಗದಾಂಗಾಯಿತೆನಗೆ ||ಪ||

ಸಂತಿಗೋಗಿ ಸಣ್ಣದೊಂದು
ಚಿಂತಾಕವ ಕದ್ದುಕೊಂಡು
ಹಂತಿಲಿದ್ದವರೆಲ್ಲ ಕಂಡರೆ
ಮೆಂತೇದವನಾ ಹೊಲಾಪೂಕ್ಕೆ
ಕಾಂತೆ ಕಬ್ಬಿನ ವನದಿ ಬಂದು
ಕುಂತೆಲ್ಲ ಶೀಗಿಹುಣ್ಣಿವಿಗೆ ||೧||

ದಿನದಲ್ಲಿ ಹುಡುಗಿ ಸಣ್ಣಾಕಿ ಒಳ್ಳೆ
ಘನ ಹಿರಿಯರಿಗೆ ಕಣ್ಣಾರೆ
ಎಣಕಿಗೆಟ್ಟ್ಹಾದರವ ಮಾಡಿ
ಹಣಜಿ ಹುಲ್ಲೋಳಡಗಿ ನೋಡಿ
ಬಣಜಿಗೇರಣ್ಣಾನ ಕೂಡಿ
ಕಣಜತುಂಬಾ ಹೊನ್ನ ಗಳಸಿ ||೨||

ನೊಣವು ಹತ್ತಿಗೆ ಏರಿ ಸಣ್ಣ
ಮಣಕ ಎಮ್ಮಿ ಕೋಣನೀದ್ಹಾಂಗ,
ಶಿಶುನಾಳೇಶನ ಸೇವಕಗೆ ಸುಳ್ಳೇ
ವಿಷಯಕ್ಕೆ ಎಳಸೀದಿ ಹೀಗೆ ||೩||

ಹಸಿಯ ಕಬ್ಬಿನಂತೆ ಶಟದು
ಮಸಿವ ಹಿಂಡಿಯ ಕಲ್ಲು ಕಟದು
ಹೆಸರ ಬಳ್ಳಿಗೆ ಉರುಳಿಬಿದ್ದು
ಕಸದ ಬುಟ್ಟಿ ಹೊತ್ತುಕೊಂಡು
ಬಸರು ಬಯಕಿ ತೋರಲಾಗಿ
ಕೊಸರಿತಲ್ಲೋ ಕರ್ಮ ಕಣ್ಣಿಗೆ ||೪||

****