ನಿನ್ನ ನೀತಿ ಅದಾವ ದೇವರಿಗೆ ಪ್ರೀತಿಯೋ!

ನಿನ್ನ ನೀತಿ ಅದಾವ ದೇವರಿಗೆ ಪ್ರೀತಿಯೋ!
ನೀನೆ ಸರಿ ಅನ್ನಬೇಕು;
ಪ್ರೀತಿಗಾಗಿಯೆ ಎಲ್ಲ ತೆತ್ತ ಜೀವವೆ ಹೀಗೆ
ಆಡಿ ಕಾಡಿಸುವುದು ಸಾಕು.

ಏಕಾಂತವೆನ್ನುವುದೆ ಇಲ್ಲ ನನಗೀಗ
ಎದೆಯೊಳೆ ಬಿಡಾರ ಹೂಡಿರುವೆ;
ಶಾಂತಿ ನೆಮ್ಮದಿ ಈಗ ಯಾವ ಊರಾಚೆಗೋ
ನಿನ್ನದೇ ನಾಮಜಪ ನನಗೆ.

ನಿನ್ನ ಕಾಣುವ ಮುನ್ನ ಏನೆಲ್ಲ ಆಸೆಗಳು
ಏನೆಲ್ಲ ಕನಸಿತ್ತು ನನಗೆ;
ಎಲ್ಲ ತೀರಿತು, ನಿನ್ನ ಧ್ಯಾನವೊಂದೇ ಈಗ
ಕಿಚ್ಚಾಗಿ ಹಬ್ಬುತಿದೆ ಒಳಗೆ.

ಕಲ್ಲದೇವರ ಹಾಗೆ ನಿಲ್ಲಬಾರದು ಹೀಗೆ
ಕ್ರೂರವಾದರೆ ಹೇಗೆ ಚೆಲುವು?
ಶರಣಾದ ಜೀವಕ್ಕೆ ಮರುಗಿ ಸಂತೈಸದೇ
ದೂರವಾದರೆ ಹೇಗೆ ಒಲವು?
*****
ಪುಸ್ತಕ: ನಿನಗಾಗೇ ಈ ಹಾಡುಗಳು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾರಿ ಬಿಡಿ
Next post ನಗೆ ಡಂಗುರ – ೧೦೫

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…