ಶ್ರೀಗುರು ನಿತ್ಯನಿರಾಲಂಬ ನಿಜಪದ ಸೇವಕ
ಈ ಆತ್ಮಾ ಶಿವಯೋಗಿ                               ||ಪ||

ಮರಳಿ ತೆರಳದಂತೆ ಭವದೊಳು ಬಾರದೆ
ಮರಣರಹಿತ ನಿಮ್ಮ ಚರಣಕ್ಕೆ ಎರಗುವೆ          ||ಅ.ಪ.||

ಆರನಳಿದು ಮುನ್ನ ಮೂರು ಮೀರಿತು ಆತ್ಮಾ ಏರಿ
ಪಾರಮರ್ಥದೊಳಿರುವಾ ನಾಲಿ ನಿಲ್ಲಿಸಿ
ಗುರುಸಾಧ್ಯನಾಗುತ ತಾನು
ಬ್ಯಾರೆ ಬೈಲು ಬ್ರಹ್ಮಜ್ಞಾನದೊಳಿರುವನಯ್ಯ         ||೧||

ವಸುಧಿಯೊಳು ಶಿಶುನಾಳಧೀಶನ ಸೇವಕ
ಉಸುರಿದ ನುಡಿಕೇಳಿ ಪಸರಿಸುವಾ
ಶಶಿಕಿರಣದೋಳ್ ಗುರುಗೋವಿಂದನಾಥನ
ಶಿಶುವೆಂದಿನಿಸಿದಂಥಾ ಕುಶಲ ಶರೀಫನು           ||೨||

****