ಶ್ರೀಗುರುನಾಥನ ಆಲಯದೊಳು ನಾವ್-
ಈರ್ವರು ನಲಿದಾಡುನು ಬಾ ಬಾ ||ಪ||

ಬಾರದಿದ್ದರೆ ನಿನ್ನ ಮಾರಿಗೆ ಹೊಡೆವೆನು
ಸಾರಿ ಈರ್ವರು ನಲಿದಾಡುನು ಬಾ ಬಾ ||೧||

ಯೋಗದ ಕುದುರೆಯ ಬ್ಯಾಗನೆ ಏರುತ
ಮ್ಯಾಗೇರಿಯವಮಠಕ್ಹೋಗುನು ಬಾ ಬಾ ||೨||

ನಡಿ ನಡಿ ಶಿಶುನಾಳಧೀಶನ ಗುಡಿಯೊಳು
ಅಡಗಿದ ಪ್ರಣಮವ ನೋಡುನು ಬಾ ಬಾ ||೩||

****