ನೋಡುನು ಬಾ ಗುರುನಾಥನ ಸಖಿ
ನೋಡುನು ಬಾ ಮುಕ್ತಿ ಬೇಡುನು ಬಾರೆ ||ಪ||

ಕಾಮಿತ ಫಲವಾ ಪ್ರೇಮದಿ ಕೊಡುವಾ
ನಮ ರೂಪವ ಸಂಜೀವನ ಸಖಿ ನೋಡುನು ಬಾ ||೧||

ಪರಮ ಪ್ರಕಾಶ ಪಾವನಕರ ಜಗದಿಶನೇ ಸಖಿ
ಹೃತಭವತಾಪಾ ಸಂಹೃತ ಕೋಪಾ ಗುಡಿಪುರ
ಕಲ್ಮಠ ಸ್ವರೂಪನ ಸಖಿ ನೋಡುನು ಬಾ ||೨||

ವಸುಧೆಗೆ ಶಿಶುನಾಳಧೀಶನೆನಸಿದ
ಎಸೆವೆನ್ನಿ ನೇತ್ರನ ವಂದಿಸಿಯಾತನ ಸಖಿ ನೋಡುನು ಬಾ ||೩||

****