ಹಾಕಿದ ಜನಿವಾರವಾ ಸದ್ಗುರುನಾಥಾ
ಹಾಕಿದ ಜನಿವಾರವಾ || ಪ ||

ಹಾಕಿದ ಜನಿವಾರ ನೂಕಿದ ಭವಭಾರ
ಬೇಕೆನುತಲಿ ಬ್ರಹ್ಮಜ್ಞಾನ ಉಚ್ಚರಿಸೆಂದು || ಅ. ಪ.||

ಸಂದ್ಯಾವಂದನೆ ಕಲಿಸಿ ಆ-
ನಂದದೀವ ಬಿಂದು ವರ್ಗದಿ ನಿಲಿಸಿ
ಹೊಂದಿಸಿ ಯಮುನಾತೀರದ ಮಧ್ಯದಲಿನಿಂದು
ಎಂದೆಂದಿಗೂ ಯಮದಂದುಗನವಳಿಯೆಂದು || ೧ ||

ಶಿಶುನಾಳಧೀಶನಲ್ಲೇ ಹುಣ್ಣಿವಿನೂಲು
ಹೊಸತಾಗಿ ಹೊಸಿಯುತಲಿ
ಮುಸುಕಿರ್ದವ್ಯಸನದ ಕಸರನು ಕಳಿಯೆಂದು
ಹಸನಾಗಿ ಮೂಲಮಂತ್ರದ ಮನಿಯೊಳುನಿಂದು || ೨ ||

****