ಮುದಿಕ್ಯಾಗಿ ಮುರುಕ ಇನ್ನ್ಯಾಕ
ಎದುರಿಗೆ ನೀರಗಿಗಳ್ ಒದೆಯುವದು ಸಾಕೆ ||ಪ||

ಮೊದಲಿಗೆ ಮೂವರು ಕೂಡಿ ಮಾಯ
ಮದನ ಮಂದಿರದೊಳು ಮುದದಿ ಮಾತಾಡಿ
ಹದಗೆಟ್ಟು ಹಾದರ ಮಾಡಿ ಮುಂದೆ
ಬದುಕಿನ ಎಚ್ಚರ ನಿನಗಿಲ್ಲ ಖೋಡಿ ||೧||

ಏಳೆಂಟು ಗೆಳತೇರು ಜತ್ತು ಹಳ್ಳಿ ಹಳ್ಳಿ
ಸೂಳೇರ ತೆರದಲ್ಲಿ ತಿರುಗುತಿ ಎತ್ತ
ಕಾಳ ಕತ್ತಲದೊಳು ಗೊತ್ತು
ಹಾಳು ಗುಡಿಯೊಳು ಬಂದು ಬೀಳುದು ಕತ್ತೆ ||೨||

ನೆರೆ ಹಾಯ್ತು ತೆಲಿ ಬೆಳ್ಳಗಾಯ್ತು ಬುದ್ಧಿ
ಬರಲಿಲ್ಲ ಹಿರಿ ಕಿರಿಯರು ಹೇಳಲಾಗಿ ಜನ
ಹರಲಿಗೆ ಗುರಿಯಾಗಿ ನೀನು
ಶಿಶುನಾಳೇಶಗ ಜೋಡು ಕಾಯಿ ವಡಿಸವ್ವಾ ಮುದಿಕಿ ||೩||

****