ಎಂಥಾ ನಗಿ ಬಂತೋ ಎನಗೆ

ಎಂಥಾ ನಗಿ ಬಂತೋ ಎನಗೆ
ಗಡ ಮುದುಕಿಯ ಕಂಡು ||ಪ||

ನಿಂತು ನೋಡಲಾಗವಲ್ಲದು ಕಣ್ಣಿಲೆ
ಸಂತ್ಯಾಗ ಮಂದಿ ಕಾಣದವಳೋ ||ಅ.ಪ.||

ಆರು ಮೂರು ಗೆಳತೇರ ಸ್ನೇಹವನು
ದೂರ ಮಾಡದೆ ಸುಮ್ಮಾನದಿ ತಾನು
ದಾರಿಹಿಡಿದು ಸಾರುವಳಿದು ಏನು
ದಾರಿ ನಡೆದ ಮುದುಕಿಯ ಕಂಡು ||೧||

ಎಂಟು ಮಂದಿ ನೆಂಟರು ಮನಸೋತು
ಗಂಟುಬೀಳಲವರನು ಕೂಡಿಕೊಂಡು
ಪಂಟುಹಚ್ಚಿ ಪರವಶದಿ ಪೋಗುತಿಹ
ಸೊಂಟಮುದುಕಿಯನು ಕಂಡು ||೨||

ಸಂದಿಗೊಂದಿಯೊಳು ಹುಡಕುತ ಬರಲು
ತಂದೆ ಗುರುಗೋವಿಂದನ ಚರಣವ
ಹೊಂದಿಕೋ ಎಂದರೆ ನಿಂದೆಯನಾಡುತ
ಮುಂದಕೆ ನಡಿವಳು ಮಂದಗಮನದಿ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಡಿ ನಡಿಯುತ ಗಂಡ ನಡಮುರಿದೊದೆದೆನ್ನ
Next post ಸಕ್ರನೆಂಬುವನ ಬಂಡಾಯದ ವೃತ್ತಾಂತವು

ಸಣ್ಣ ಕತೆ

 • ಹೃದಯ ವೀಣೆ ಮಿಡಿಯೆ….

  ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

 • ಮಿಂಚು

  "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

 • ಅವಳೇ ಅವಳು

  ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

 • ಬೂಬೂನ ಬಾಳು

  ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

 • ಹೃದಯದ ತೀರ್ಪು

  ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…