ನಮ್ಮನಿಮ್ಮಗಾಗದು
ಸುಮ್ಮನೆ ಹೊತ್ತು ಹೋಗದು ||ಪ.||

ಕ್ರಮವಗೆಡಿಸಿ ಮಮತೆವಿಡಿಸಿ
ರಮಿಸಿ ರಮಿಸಿದಲ್ಲೆ ಸಖೀ ||ಅ.ಪ.||

ಕರುಣವಿಲ್ಲದೇ ಹಿರಿಯರ ದಣಿಸಿ
ಕಿರಿಯರ ಕುಣಿಸಿದಿ ಸೇರಲಾರದೆ
ಕಿರಿಯ ತಮ್ಮಗೆ ಮಾರಿದೋರದೆ
ಹರಿದು ಹೋದಿಯಲ್ಲೇ ಸಖಿ ||೧||

ಬಲ್ಲಿದ ಬಿಡಿಸಿದಿ ಒಳ್ಳೇರ ಕೆಡಸಿದಿ
ಕಳ್ಳರ ಹೊಡೆಸಿದಿ ಸುಳ್ಳರ ಬಡಿಸಿದಿ
ಮಳ್ಳಿಯ ತೆರದಿ ಮಾತನಾಡಿ
ತಳ್ಳಿಯ ದೂರಮಾಡಿದೆ ಸಖಿ ||೨||

ಪೊಡವಿಪ ಶಿಶುನಾಳ
ಒಡೆಯನ ಮಗನಿಗೆ
ಕಡುಮೋಹಗೊಳ್ಳಲು ನುಡಿಯುವುದೇ ನಿನ್ನಾಟ
ಬಿಡು ಬಿಡು ಸಲ್ಲದು ಕಡುಕೇಡು ತಪ್ಪದು ||೩||

****