ದಯಮಾಡಬೇಕೇ ಮಾನಿನಿಯೆ

ದಯಮಾಡಬೇಕೇ ಮಾನಿನಿಯೆ
ಮೋಹದ ಮನಗೋನಿಯೇ ||ಪ.||

ವನಜಾನನೆ ಬಾಳ ದಿನ ಮನಸೋತೆನು
ಕನಕರಿಸುತಲಿರುವೆನು ಕನಕದ ಗಿರಿಜಾನಿಯೆ ||೧||

ಚಂದ್ರವದನೇ ಬಾ ಇಂದ್ರಲೋಕದ ರಂಭೆ
ಎಂದಿಗಾದರೂ ಇಂಥಾ ಗುಣವೇನಂದಪುರುಷನ ಖಣಿಯೇ ||೨||

ವಸುಧಿಯೋಳ್ ಶಿಶುನಾಳಧೀಶನ ಸೇವಕನೊಳು ಮನ
ತುಸು ಕರುಣವಿರಲಿ ಕಾಮಿನಿಯೇ ಕುಸುಮಾಸ್ತ್ರನ ಖಣಿಯೇ ||೩||

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲರಂಥವನಲ್ಲ ನನ ಗಂಡ
Next post ಏನಾಯ್ತೇ ಮಾನಿನಿ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys