Home / ಬಾಲ ಚಿಲುಮೆ / ಕಥೆ / ದಯಾಳು ಶ್ರೀಮಂತ

ದಯಾಳು ಶ್ರೀಮಂತ

ಒಂದು ಊರಿನಲ್ಲಿ ಜಯಶೀಲ ಎಂಬ ದಯಾಳು, ಶ್ರೀಮಂತ ಯುವಕನಿದ್ದ. ಒಮ್ಮೆ ಪಕ್ಕದ ಊರಿಗೆ ವ್ಯಾಪಾರಕ್ಕೆಂದು ಹೊರಟಿದ್ದ. ದಾರಿಯಲ್ಲಿ ಕೋಳಿಯನ್ನು ಬಲಿ ಕೊಡುವುದನ್ನು ನೋಡಿ ಆಲ್ಲಿಯ ಜನರಿಗೆ ಹೇಳಿದ: `ಅನ್ಯಾಯವಾಗಿ ಆ ಕೋಳಿಯನ್ನು ಕೊಲ್ಲಬೇಡಿ’ ಎಂದ. ಆದಕ್ಕೆ ಜನರು `ಅದರ ಪ್ರಾಣ ಉಳಿಸಬೇಕೆಂದರೆ ಸಾವಿರ ಬಂಗಾರದ ನಾಣ್ಯ ಕೊಡು’ ಎಂದರು. ಜಯಶೀಲ ಆವರಿಗೆ ಸಾವಿರ ಕೊಟ್ಟು ಕೋಳಿಯನ್ನು ತೆಗೆದುಕೊಂಡು ಹೊರಟ. ಮುಂದಿನ ಊರಿನಲ್ಲಿ ಮತ್ತೊಂದು ದೃಶ್ಯ ನೋಡಿದ ಅಲ್ಲಿಯ ಜನ ಕುರಿಯನ್ನು ಬಲಿ ಕೊಡುತ್ತಿದ್ದರು. `ಇದನ್ನು ಸಾಯಿಸಬೇಡಿ ನೀವು ಕೇಳಿದಷ್ಟು ಹಣ ಕೊಡುವೆ’ ಎಂದ. ಈ ಕುರಿಗೆ ಐದು ಸಾವಿರ ನಾಣ್ಯ ಕೊಟ್ಟರೆ ಬಿಟ್ಟುಬಿಡುವೆವು ಎಂದರು ಜನ. ಆವರಿಗೆ ಐದು ಸಾವಿರ ನಾಣ್ಯ ಕೊಟ್ಟು ಕುರಿಯನ್ನು ಕೊಂಡು ತನ್ನ ಊರಿಗೆ ಮರಳಿದ.

ಹೀಗೆ ಎಲ್ಲರಿಗೂ ದಾನ ಮಾಡಿ ಎಲ್ಲ ಆಸ್ತಿಯನ್ನೂ ಜಯಶೀಲ ಕಳೆದುಕೊಂಡ. ಇದನ್ನು ನೋಡಿದ ಕೋಳಿ ಮರುಗಿತು. `ಒಡೆಯಾ ನೀನೇನು ಯೋಚಿಸಬೇಡ. ಕಾಡಿನಲ್ಲಿ ನಮ್ಮ ಕೋಳಿಗಳಿಗೆ ಒಬ್ಬ ರಾಜನಿದ್ದಾನೆ. ಅವನು ನಿನಗೆ ಸಹಾಯ ಮಾಡುವನು ನಡೆ’ ಎಂದು ತಮ್ಮ ರಾಜನ ಬಳಿಗೆ ಕರೆದುಕೊಂಡು ಹೋಯಿತು. ಜಯಶೀಲನ ಪೂರ್ವಾಪರ ಏನೆಲ್ಲ ತಿಳಿದ ಕೋಳಿರಾಜ. `ನಾನು ನಿನಗೊಂದು ಬಂಗಾರದ ಮೊಟ್ಟೆ ಇಡುವ ಕೋಳಿ ಕೊಡುವೆ ತೆಗೆದುಕೋ’ ಎಂದಿತು. ಜಯಶೀಲ ಆ ಕೋಳಿಯನ್ನು ತೆಗೆದುಕೊಂಡು ತಮ್ಮೂರಿಗೆ ಹಿಂದಿರುಗಿದ. ಕೋಳಿ ಬಂಗಾರದ ಮೊಟ್ಟೆ ಇಡತೊಡಗಿತು. ಇದರಿಂದ ಜಯಶೀಲ ಶ್ರೀಮಂತನಾದ. ಒಮ್ಮೆ ಕುರಿ `ನಾನೂ ನಿನಗೆ ಏನಾದರೂ ಉಪಕಾರ ಮಾಡಬೇಕೆಂದಿರುವೆ. ಆದಕ್ಕೆ ನಮ್ಮ ಕುರಿ ಹಟ್ಟಿಗೆ ಹೋಗೋಣ. ಆಲ್ಲಿ ನಮ್ಮ ಕುರಿನಾಯಕ ಇದ್ದಾನೆ ಅವನು ನಿನಗೆ ಸಹಾಯ ಮಾಡುತ್ತಾನೆ’ ಎಂದು ಹೇಳಿ ಜಯಶೀಲನನ್ನು ಕರೆದುಕೂಂಡು ಹೋಯಿತು. ಅಲ್ಲಿ ಕುರಿ ನಾಯಕ ಆಪರೂಪದ ಬಂಗಾರದ ಉಣ್ಣೆ ಕೊಡುವ ಕುರಿಯನ್ನು ಕೊಟ್ಟಿತು. ಆದನ್ನು ತೆಗೆದುಕೊಂಡು ಬಂದನು. ಜಯಶೀಲ ಎಲ್ಲರಿಗೆ ದಾನ ಮಾಡಿ ಹೆಸರುವಾಸಿಯಾದನು.

ಒಮ್ಮೆ ಇವನ ದಾನ, ಧರ್ಮ, ಒಳ್ಳೆಯತನ ಪಕ್ಕದ ರಾಜ್ಯದ ರಾಜಕುಮಾರಿಗೂ ಗೊತ್ತಾಗಿ ಜಯಶೀಲನನ್ನು ನೋಡಲು ಬಂದಳು. ಅವನನ್ನು ನೋಡಿದೊಡನೆ ಮೋಹಗೊಂಡು, ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದಳು. ಜಯತೀಲ ಒಪ್ಪಿ ಮದುವೆಯಾದ. ಈ ವಿಷಯ ತಿಳಿದ ರಾಜಕುಮಾರಿಯ ತಂದೆ ಇವಳನ್ನು ಕರೆತಂದು ಸೆರೆಮನೆಗೆ ಅಟ್ಟಿದ. ವಿಷಯ ತಿಳಿದ ಜಯಶೀಲ ದುಃಖಿತನಾದ. ಆಗ ಕೋಳಿ ಮತ್ತು ಕುರಿ `ನೀನೇನು ಚಿಂತಿಸಬೇಡ, ರಾಜಕುಮಾರಿಯನ್ನು ನಾವು ಕರೆತರುತ್ತೇವೆ’ ಎಂದು ಹೇಳಿ ಅರಮನೆಯತ್ತ ಹೊರಟವು. ಅಲ್ಲಿ ಸೇವಕಿಯರ ವೇಷ ಧರಿಸಿದವು. ಸೆರೆಮನೆಯಲ್ಲಿ ಅಳುತ್ತ ಕುಳಿತಿರುವ ರಾಜಕುಮಾರಿಯನ್ನು ನೋಡಿ, ನೀನು ಅಳಬೇಡ ಜಯಶೀಲನ ಬಳಿ ಕರೆದೊಯ್ಯುತ್ತೇವೆ ಎಂದು ಹೇಳಿ ತಮ್ಮ ನಿಜ ರೂಪ ತಳೆದವು. ಅದನ್ನು ನೋಡಿ ಹೆದರಿದಳು ರಾಜಕುಮಾರಿ. `ಹೆದರಬೇಡ ನಾವು ನಿನಗೆ ಸಹಾಯ ಮಾಡುವೆವು. ನನ್ನ ಬೆನ್ನ ಮೇಲೆ ಕುಳಿತುಕೊ’ ಎಂದಿತು ಕುರಿ. ರಾಜಕುಮಾರಿ ಜತೆಗೆ ಕೋಳಿಯೊಂದಿಗೆ ಕುರಿಯ ಬೆನ್ನ ಮೇಲೆ ಕುಳಿತು ಬಂದಳು. ಇದನ್ನು ನೋಡಿದ ಜಯಶೀಲ ಸಂತೋಷಗೊಂಡ. ರಾಜಕುವಕಾರಿ, ಕೋಳಿ ಮತ್ತು ಕುರಿಯೊಂದಿಗೆ ನೆಮ್ಮದಿಯಿಂದ ಬಾಳಿದ ಜಯಶೀಲ.

     *****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...