ತಂಪು

ಮೂಡುವನು ರವಿ ಮೂಡುವನು.  ಕತ್ತಲೊಡನೆ ಜಗಳಾಡುವನು
ಮೂಡಣ ರಂಗಸ್ಥಳವನು ನೆತ್ತರು ಮಾಡುವನು.
ಅವನು ಬರಬೇಕಾದರೂ ಕೆಂಪು ರಾಣಾರಂಪ
ಹೋಗಬೇಕಾದರೂ ಕೆಂಪು ರಾಣಾರಂಪ.
ನನಗೆ ಜಗಳವೂ ಇಲ್ಲ, ಕೆಂಪು ರಾಣಾರಂಪ ಯಾವುದೂ ಇಲ್ಲ.
ಬರುವಾಗಲೂ ತಂಪು ಹೋಗುವಾಗಲೂ ತಂಪು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೃಷ್ಣಾಕುಮಾರಿಯ ಆತ್ಮಹತ್ಯೆ
Next post ಜಾತಿ ಗೀತಿ ಎಂಬುದೆಲ್ಲ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…