ಉಳವಿಯ ಜಾತ್ರೆಗಿ ಹೋಗೋಣು ಬನ್ನಿರಮ್ಮಾ

ಉಳವಿಯ ಜಾತ್ರೆಗಿ ಹೋಗೋಣು ಬನ್ನಿರಮ್ಮಾ
ತಿಳಿದು ಬ್ರಹ್ಮದ ಬಯಲೊಳಗಾಡೋಣಮ್ಮಾ || ಪ ||

ಬಲು ಸಂಸಾರವೆಂಬುವ ಹಳುವನೆಲ್ಲವ ದಾಟಿ
ಸುಳಿದಾಡಿ ಶರಣರ ಬಳಿವಿಡಿದಾಡುತ || ಆ. ಪ. ||

ಬ್ರಹ್ಮರಕ್ಕಸಿಯೆಂಬ ಘಟ್ಟವ ದಾಟಿ
ಹಮ್ಮನಳಿದು ದಾರಿ ಸುಮ್ಮನೆ ಹಿಡಿದು
ಒಮ್ಮನದಿಂದಲಿ ಶ್ರೀಚನ್ನಬಸವನ
ರಮ್ಮ್ಯಾದ ವನವನು ಗಮ್ಮನೆ ನೋಡುತ || ೧ ||

ಅಲ್ಲಿಂದ ಮಹಾಮುನಿ ಕೈಲಾಸದಿ
ನಿಲ್ಲದೆ ಆಕಳಗವಿಯೊಳಗೈದಿ
ಬಲ್ಲಿದ ಶಿಶುನಾಳಧೀಶನ ಭಜಿಸುತ
ಎಲ್ಲ ಜಂಜಡ ಬಿಟ್ಟು ಯಾರಿಗಂಜದಲೆ || ೨ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಏ ಸಖರಿಯೆ ನಾ ಸಖರಿಯೆ
Next post ಮುತ್ತು ರನ್ನದ ಕಿಡಿ ಉದುರೀತು

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…