ಒಂದು ಎರಡು
ತಿಂಡಿ ತಿನ್ನೋಕ್ ಹೊರಡು
ಮೂರು ನಾಕು
ನಾಕೇ ದೋಸೆ ಸಾಕು
ಐದು ಆರು
ಬಿಸಿ ಕಾಫಿ ಹೀರು
ಏಳು ಎಂಟು
ಶಾಲೆಗೆ ರಜ ಉಂಟು
ಒಂಬತ್ತು ಹತ್ತು
ಬಂತು ಆಟದ ಹೊತ್ತು
ಚೆಂಡು ದಾಂಡು ಆಮೇಲೆ
ಬುಗುರಿಗೆ ದಾರ ಸುತ್ತು.
*****
ಲಕ್ಷ್ಮೀನಾರಾಯಣ ಭಟ್ಟರು ಕನ್ನಡ ಕಾವ್ಯದ ಜೀವಂತಿಕೆಯನ್ನು ಹೆಚ್ಚಿಸುತ್ತ ಆಧುನಿಕ ಕನ್ನಡ ಕಾವ್ಯವನ್ನು ಬೆಳೆಸುತ್ತ ಬಂದಿರುವ ಪ್ರಮುಖ ಕವಿಗಳಲ್ಲಿ ಒಬ್ಬರು. ಅವರ ಅನುವಾದಗಳು ಕನ್ನಡ ಕಾವ್ಯಕ್ಕೆ ಕೊಟ್ಟ ಬೆಲೆಬಾಳುವ ಉಡುಗೊರೆಗಳು ಮಾತ್ರವಾಗಿರದೆ ಸ್ವಂತಕ್ಕೆ ಪಡೆದ ರಕ್ತದಾನವೂ ಆಗಿದೆ. ಸ್ವಂತ ಪ್ರತಿಭೆ, ಶ್ರೇಷ್ಠಕವಿಗಳ ಆಪ್ತ ಅಧ್ಯಯನ ಎರಡೂ ಅವರನ್ನೂ ಎತ್ತರಕ್ಕೆ ಹತ್ತಿಸಿವೆ. ಅಧ್ಯಯನ, ಚಿಂತನೆ ಇವು ಅವರಲ್ಲಿ ಹಾಸು ಹೊಕ್ಕಾಗಿ ಒಂದನ್ನು ಮತ್ತೊಂದು ಬಲಗೊಳಿಸುತ್ತ ಬಂದಿವೆ.
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್ಥಮಾಡಿ ಕೊಳ್ಳು...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...