ನನ್ನ ಹೇಣ್ತೆ ನನ್ನ ಹೇಣ್ತೆ

ನನ್ನ ಹೇಣ್ತೆ ನನ್ನ ಹೇಣ್ತೆ
ನಿನ್ನ ಹೆಸರೇನ್ಹೇಳಲಿ ಗುಣವಂತೆ || ಪ ||

ಘನ ಪ್ರೀತಿಲೆ ಈ ತನುತ್ರಯದೊಳು
ದಿನ ಅನುಗೂಡುನು ಬಾ ಗುಣವಂತೆ ||ಅ.ಪ.||

ಮೊದಲಿಗೆ ತಾಯ್ಯಾದಿ ನನ್ನ ಹೇಣ್ತೆ ಮತ್ತೆ
ಸದನಕ ಸೊಸಿಯಾದಿ ನನ್ನ ಹೇಣ್ತೆ
ಮುದದಿಂದ ಮೋಹಿಸಿ ಮದುವ್ಯಾದವನಿಗೆ
ಮಗಳೆಂದೆನಿಸಿದೆ ನನ್ನ ಹೇಣ್ತೆ ||೧||

ಅತ್ತಿಗಿ ನಾದುನಿ ನನ್ನ ಹೇಣ್ತೆ
ನಮ್ಮತ್ಯಾಗಿ ನಡೀಯೆ ನನ್ನ ಹೇಣ್ತೆ
ತುತ್ತು ನೀಡಿ ಎನ್ನೆತ್ತಿ ಆಡಿಸಿದಿ
ಹತ್ತವ್ವನೆನಸಿದೆ ನನ್ನ ಹೇಣ್ತೆ
ಚಿಕ್ಕಮ್ಮನ ಸರಿ ನೀ ನನ್ನ ಹೇಣ್ತೆ ಎನಗ
ತಕ್ಕೆವಳನಿಸಿದೆ ನನ್ನ ಹೇಣ್ತೆ ||೨||

ಅಕ್ಕರದಲ್ಲಿ ಅನಂತಕಾಲಾ ನಮ್ಮ
ಅಕ್ಕಾಗಿ ನಡೆದೆಲ್ಲ ನೀ ನನ್ನ ಹೇಣ್ತೆ
ಬಾಳೊಂದು ಚಲ್ವಿಕೆ ನನ್ನ ಹೇಣ್ತೆ
ಆಳಾಪಕೆಳಸಿದೆ ನನ್ನ ಹೇಣ್ತೆ
ಜಾಳಮಾತಲ್ಲವು ಜಗದೊಳು ಮೋಹಿಸಿ
ಸೂಳೆ ಎಂದನಿಸಿದೆ ನನ್ನ ಹೇಣ್ತೆ ||೩||

ಮಂಗಳರೂಪಳೆ ನನ್ನ ಹೇಣ್ತೆ
ಅರ್ಧಾಂಗಿಯೆನಿಸಿದೆ ನನ್ನ ಹೇಣ್ತೆ
ಶೃಂಗಾರದಿ ಸವಿ ಸಕ್ಕರೆ ಉಣಿಸುವ
ತಂಗೆಂದೆನಬೇಕ ನನ್ನ ಹೇಣ್ತೆ
ಕುಶಲದಿ ಕೂಡಿದ ನನ್ನ ಹೇಣ್ತೆ
ವಸುಧಿಯೊಳು ಶಿಶುನಾಳಧೀಶನಡಿಗೆ ಹೆಣ್ಣು
ಶಿಶುವಾಗಿ ತೋರಿದಿ ನನ್ನ ಹೇಣ್ತೆ
ನಿನ್ನ ಹೆಸರೇನು ಹೇಳಲಿ ಗುಣವಂತೆ ||೪||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸುಗ್ಗಿ ಮಾಡೋಣು ಬಾರವ್ವ ಗೆಳತಿ
Next post ಕನ್ನಡಕ್ಕಿದೆಯೇ ಕಾಯಕಲ್ಪ?

ಸಣ್ಣ ಕತೆ

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…