ಪಂಚಮಿ ಹಬ್ಬಾ ಬಂದೀತು ಗೆಳತಿ

ಪಂಚಮಿ ಹಬ್ಬಾ ಬಂದೀತು ಗೆಳತಿ
ಇನ್ನಾರಿಗ್ಹೇಳಲಿ || ಪ||

ಅವಕ್ಕ ನಾರಿ ಜೋಕಾಲಿ ಏರಿ
ಕೈಬೀಸಿ ಕರಿಯಾಲೀ || ೧ ||

ಅರಳಿಟ್ಟು ತಂಬಿಟ್ಟು ನಾಗಪ್ಪಗ್ಹಾಲ ಹೊಯ್ಯಲಿ
ಅಣ್ಣನಪಾಲು ತಮ್ಮನಪಾಲು ಅಕ್ಕನಪಾಲು ಮುತ್ತಾಗಲಿ || ೨ ||

ಮಾವನಪಾಲು ಮೈದುನಪಾಲು ಗಂಡನಪಾಲು ಮನದಲ್ಲೆ
ಊರಪಾಲು ದೇವರಪಾಲು ಗುರುವಿನಪಾಲು ಆತ್ಮದಲ್ಲೆ || ೩ ||

ವಸುಧಿಯೊಳು ಶಿಶುನಾಳಧೀಶನಪಾಲು
ಬಸವಗೆ ಮುಟ್ಟಲಿ || ೪ ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡಕ್ಕಿದೆಯೇ ಕಾಯಕಲ್ಪ?
Next post ಧ್ವಜ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…