ಸ್ನೇಹ ಮಾಡಬೇಕಿಂಥವಳಾ

ಸ್ನೇಹ ಮಾಡಬೇಕಿಂಥವಳಾ
ಒಳ್ಳೆ ಮೋಹದಿಂದಲಿ ಬಂದು ಕೂಡುವಂಥವಳಾ ||ಪ||

ಚಂದ್ರಗಾವಿ ಶೀರಿನುಟ್ಟು
ದಿವ್ಯಕೊಮ್ಮೆ ಪಾರಿಜ ಮಗ್ಗಿ ಕುಬ್ಬಸತೊಟ್ಟು
ಬಂದಳು ಮಂದಿರ ಬಿಟ್ಟು
ನಾಲ್ಕು ಮಂದಿಯೊಳು ಬಂದು ನಾಚುವಳೆಷ್ಟು ||೧||

ಅರಗಿಳಿ ಸಮ ನುಡಿಯು
ಚಲ್ವಸುಳಿನಾಬಿ ಕುಚ ಕುಂಭಗಳ ಹಂಸ ನುಡಿಯು
ಥಳಿಥಳಿಸುವ ತೋಳ್ತೊಡೆಯು
ಒಳ್ಳೆ ಬಳಬಳಕುವ ನಡುವಿನ ತಳಿರಡಿಯು ||೨||

ಕುಸುಮಲೋಚನೆಯಳ ನೋಡಿ
ಕಾಮ ವಿಷಯ ಸುರತಸುಖ ದಯದಿಂದ ಬೇಡಿ
ವಿನಯ ವಚನದಿ ಮಾತಾಡಿ
ದೇವ ಶಿಶುನಾಳಧೀಶನ ದಯದಿಂದ ಕೂಡಿ ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲವ್ವಲ್ ಹಿಂಗೇನೆ
Next post ನಾನೆಂಬ ಹುಡುಕಾಟ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…