ಕತ್ತಲೆ ಬೆಳಗೆಂಬುದಿಲ್ಲ ನಿತ್ಯನಾದಂಗೆ.
ಚಿತ್ತಪರಚಿತ್ತವೆಂಬುದಿಲ್ಲ ವಸ್ತುವಿನ ನೆಲೆಯ ಕಂಡವಂಗೆ.
ನಿತ್ಯ ಅನಿತ್ಯವೆಂಬುದಿಲ್ಲ ಕರ್ತುತಾನಾದವಂಗೆ.
ಈ ಮೂರರ ಗೊತ್ತುವಿಡಿದು ನಿಶ್ಚಿಂತನಾಗಿ
ನಿರ್ವಯಲನಾದ ಶರಣರ ಪಾದಕ್ಕೆ
ಶರಣೆಂದು ಸುಖಿಯಾದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****