ಕಂಡಿಹೆ ಕೇಳಿಹೆನೆಂಬ ದ್ವಂದ್ವವ ಹಿಂಗಿ,
ಉಂಡಿಹೆ ಉಟ್ಟಿಹೆನೆಂಬ ಹಂಗವ ಬಿಟ್ಟು,
ನಡಿದಿಹೆ ನುಡಿದಿಹೆನೆಂಬ ಮಾಟವ ನಿಲಿಸಿ,
ಜಗದಾಟವ ನಿಲಿಸಿ, ಮಾಟ ಕೂಟ ಜಗದಾಟ
ಕೋಟಲೆಯೊಳು ಸಿಕ್ಕದೆ ದಾಟಿ ಹೋದ
ಶರಣರ ಪಾದಕ್ಕೆ ಶರಣೆಂದು ಬದುಕಿದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****