ಒಮ್ಮೊಮ್ಮೆ ಎನಿಸುವುದು

ಒಮ್ಮೊಮ್ಮೆ ಎನಿಸಿವುದು ಜೀವವಾರಿದಮೇಲೆ
ಸುಖಸ್ವಪ್ನಗಳ ಬಿಂಬ ಮೂಡುವುದು ಎಂದು,
ಕೊಳದ ನೀರಲೆಯಳಿದು ಮೌನದಲಿ ಮಲಗಿರಲು
ಸೌಂದರ್ಯದಾಗಸವ ಬಿಂಬಿಸುವ ತೆರದಿ!

ಆದರೆಂತೋ ಏನೊ! ಅಂತಾದರೆನಿತುಸುಖ,
ಬಾಳದು ಸ್ವಪ್ನವನು ಮರೆಯಬಹುದಾಗ!
ಜೀವದೊಳಗಿಲ್ಲದುದ ಸಾವಿನಲಿ ಪಡೆಯುತಲಿ
ನೋವಿಲ್ಲದೊಲವಿನಿಂದ ಸವಿಯಬಹುದಾಗ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಉಪದೇಶ
Next post ಹಾಲೆಂಡಿನ ನಿಸರ್ಗ

ಸಣ್ಣ ಕತೆ

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys