ಅರಿತವರು ಆರು?

ಜಗವೊಂದು ಬಂದರೀ ಜೀವಸಾಗರದಲ್ಲಿ
ಹಡಗುಗಳು ಐತಂದು ಕೂಡುವುವು ದಿನವು,
ತೆರತೆರದ ಜನರಿಹರು-ವಿಧವಿಧದ ಭಾಷೆಗಳು
ಚಣಕಾಲ ಸಂಧಿಸುತ ಮೆರೆವುವಲ್ಲಿ!

ನಾಲ್ಕು ದಿನಗಳ ಜೀವ, ಒಂದಿರುಳ ಪ್ರೇಮ!
ಮುಂದೆಲ್ಲಿಗೋ ಪಯಣ, ಎಂದೊ ಮಿಲನ?
ಪಯಣದಲಿ ಸಾಗರದಿ ಕಡುತೆರೆದ ಕಷ್ಟಗಳು,
ಕಾದಿಹುದು ಮುಂದೇನೊ ಅರಿತವರು ಆರು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆತ್ಮ ಸೌಂದರ್ಯ
Next post ಕವಿಯ ಮೊದಲ ಕವನ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…