ಹೌದೆ ನಮ್ಮವ್ವ ನೀನು ಹೌದೆ

ಹೌದೆ ನಮ್ಮವ್ವ ನೀನು ಹೌದೆ
ಹೌದೆ ಭವದ ಗೊನಿ ಕೊಯ್ದೆ
ಮುಕ್ತಿಯ ಮುನಿಗೊಯ್ದೆ ನಮ್ಮವ್ವ ನೀನು ಹೌದೆ ||೧||

ಹಿಡಿದೆ ಧರ್ಮದ ಮಾರ್ಗ
ಹಿಡಿದು ಕರ್ಮದ ಬೇರು
ಕಡೆದೆ ನಮ್ಮವ್ವಾ ನೀನು ಹೌದೆ ||೨||

ಹೌದೆ ಸ್ವಾಮಿಗೆ ಹೊಚ್ಚೆ
ಕೌದಿ ಅವ್ವನ ಗುಡಿ-
ಗೊಯ್ದೆ ನಮ್ಮವ್ವಾ ನೀನು ಹೌದೆ ||೩||

ಶಿಶುನಾಳಧೀಶನ ತಿಳದೆ
ಪಾಪವನ್ನೆಲ್ಲ ಕಳದೆ
ನಮ್ಮವ್ವಾ ನೀನು ಹೌದೆ ||೪||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಿ ನಿನ್ನ ಸೇವಕನೆಂದು
Next post ನಿನ್ನ ನೋಡಿ ತಡೆಯಲಾರದೆ ಕೇಳಿದೆ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…