ಅಂಗವ ಮರೆದಂಗೆ ಲಿಂಗದ ಹಂಗೇಕೊ?
ಅರವ ಕಂಡವಂಗೆ ಕುರುಹಿನ ಹಂಗೇಕೊ?
ತಾನು ತಾನಾದವಂಗೆ ಧ್ಯಾನದ ಹಂಗೇಕೊ?
ಮನಮುಗ್ಧವಾದವಂಗೆ ಮಾನವರ ಹಂಗೇಕೊ?
ಆಸೆಯನಳಿದವಂಗೆ ರೋಷದ ಹಂಗೇಕೊ?
ಕಾಮನ ಸುಟ್ಟವಂಗೆ ಕಳವಳದ ಹಂಗೇಕೊ?
ನಡೆಗೆಟ್ಟವಂಗೆ ನುಡಿಯ ಹಂಗೇಕೊ?
ತನ್ನ ಮರೆದು ನಿಮ್ಮನರಿದ ಶರಣಂಗೆ
ಅಲ್ಲೆ ಐಕ್ಯ ಕಂಡೆ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****