ಸೇದಿದಿಯಾ ಬತ್ತಿ ನೀ ಸೇದಿದಿಯಾ

ಸೇದಿದಿಯಾ ಬತ್ತಿ ನೀ ಸೇದಿದಿಯಾ ||ಪ||

ಸೇದಿ ಬತ್ತಿಯ ಹೊಗಿ
ಊದಿ ಊರ್ಧ್ವಕೆ ನಿಂತು
ನಾದ ಬ್ರಹ್ಮದ ಗುರುಪಾದವ ಭಜಿಸಿ ||೧||

ವಿಷಯವನೆಲ್ಲವ ಬಿಟ್ಟು
ವ್ಯಸನಕಗ್ನಿಯ ಕೊಟ್ಟು
ಹಸನಾದ ಹಸರು ತಂಬಾಕದ ಬತ್ತಿಯ ||೨||

ಸಧ್ಯಕ್ಕೆ ಶಿಶುನಾಳ
ಸದ್ಗುರು ದಯದಿಂದ
ಬುದ್ಧಿತಿಳಿದು ದಿವ್ಯ ಸಿದ್ಧಜ್ಞಾನದ ಬತ್ತಿ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹದಿನಾಲ್ಕು ವರ್ಷಗಳ ನಂತರ
Next post ನಮ್ಮಯ್ಯಾ ನಿಮಗೆ ಆಗದಾಗದೋ ಗಾಂಜೀ

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…