ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ

ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ ||ಪ||

ಅಗಝಹರ ಪ್ರೀತೆ ಸುಗುಣ ಪ್ರಖ್ಯಾತೆ
ನಿಗಮಾಮಾತೀತೆ ನಗಜಾತೆ ನಿರಂಜನದೇವಿ ಪಾಹಿಮಾಂ ||೧||

ಬಲ್ಲಿದ ಯಾತ್ರೆ ಚಲ್ವ ಸುಗಾತ್ರೆ
ಅಲ್ಲಮಹಾಪುರಿ ಶ್ರೀಬೊಗಳಾಂಬಿಕೆದೇವಿ ಪಾಹಿಮಾಂ ||೨||

ಶಿಶುನಾಳವಾಸ ದೋಷ ವಿನಾಶ
ಅಸಮಸದ್ಗುರು ಗೋವಿಂದವಿಲಾಸಿ ದೇವಿ ಪಾಹಿಮಾಂ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿನ್ನ ನೋಡಿ ತಡೆಯಲಾರದೆ ಕೇಳಿದೆ
Next post ಹನುಮಂತ ಹಾರಿದ ಲಂಕಾ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…