ಬಿಡು ಬಿಡು ಈ ನಡತಿ

ಬಿಡು ಬಿಡು ನಿಮ್ಮಯ ಈ ನಡತಿ
ಛೇ ಸಲ್ಲದು ಈ ರೀತಿ ||ಪ||

ಪೊಡವಿಯೊಳಗೆ ನಮ್ಮ ಗೊಡವಿಯಾತಕೆ ನಿಮಗೆ
ನುಡಿಯದೊಂದನು ನೀನು ನಡಿನಡಿಮನೆಗೆ ||೧||

ಭೋಗವಿಷಯಸುಖ ನೀಗಿ ಯೋಗದೊಳಗೆ
ಆಗದಾಗದು ಸ್ನೇಹ ನಡಿ ನಮಗೀಗ ||೨||

ಧರೆಯೊಳು ಶಿಶುನಾಳಧೀಶನು ಕಂಡರೆ
ಮರುಳೆ ಒಪ್ಪನು ಇದಕೆ ತರವಲ್ಲವು ಕಂಡ್ಯಾ ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಯಿಯ ಸಾಕಿದರು
Next post ಸಂಬಂಜ ಅನ್ನೋದು ದೊಡ್ಡದು ಕನಾ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…