ಒಳ್ಳೇದಲ್ಲೋ ಇದು ಭೂಕಲಿ

ಒಳ್ಳೇದಲ್ಲೋ ಇದು ಭೂಕಲಿ ಬಾರೋ ಬಾ ಮಳೆ ||ಪ||

ನಾಲ್ಕು ಲೋಕದ ಜನಾ ಕಾಕೆದ್ದು ಬಳಲುತಿರಲು
ಜೋಕೆ ನಿನ್ನೊಳು ನೀ ತಿಳಿ ಕಳವಳಿಸುತಲಿ ||೧||

ಕೃಷ್ಣಾನದಿ ತುಂಬಿ ತುಳಕ್ಯಾಡಿ ಬರುತಿರಲು
ಆಣೆ ಹಾಕಿದೆ ಸೈ ಸೇರಿ ಜರಿದಾಡಿ ||೨||

ಉತ್ತರ ದಿಕ್ಕಿನಿಂದ ದುರ್ಗಿಯು ಬರುತಾಳೆ
ಕರ್ಮಗಳೆಲ್ಲ ಸಂಹರಿಸಿ ಖಬರಾ ||೩||

ಗುರುವಿನ ಮಗ ಹ್ಯಾವಾ ಹಾಕಿ ಹಿಂಬಾಲಿರುತಿರೆ
ಧರೆಯೊಳು ಶಿಶುನಾಳಧೀಶರೆ ಮಹಾಭಾಪುರೆ ||೪||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯ ಚಂದ್ರರ ಹಾಡು
Next post ಬೆಟ್ಟದಾ ಮೇಲೊಂದು

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…