ಹನುಮಂತ ಹಾರಿದ ಲಂಕಾ

ಹನುಮಂತ ಹಾರಿದ ಲಂಕಾ
ಸುಟ್ಟು ಬಿಟ್ಟಾನೋ ಬಿಡು ನಿನ್ನ ಬಿಂಕಾ ||ಪ||

ರಾಮ ರಘುಪತಿ ಭಕ್ತಾ
ಒಂದು ನಿಮಿಷದೊಳಗೆ ತಂದುಕೊಟ್ಟಾನೋ ಸೀತಾ
ಹೌಹೌದು ರಾಮರವದೂತಾ ||೧||

ರಾಮ ಲಕ್ಷ್ಮಣರ ಮಾತು
ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು
ಉಂಗುರ ಕೊಟ್ಟದ್ದು ಗೊತ್ತು ||೨||

ಶಿಶುನಾಳಧೀಶನ ಸ್ಮರಣಿ ಮರೆಯಬ್ಯಾಡ್ಯಾವತ್ತು
ರಾಮಾಯಣ ಇಲ್ಲಿಗೆ ಮುಗಿದಿತ್ತು
ಗುರುನಾಥ ಗೋವಿಂದನ ಪಾದ ಹಿಡೆಬೇಕೋ ತುರ್ತು ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜಗನ್ಮಾತೆ ಜಯತು ಜಗದಂಬಾ ಪಾಹಿಮಾಂ
Next post ರಾಮ ರಾವೇಣ ಹರಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…