ಹಲವು ಯೋಚನೆಯಿಂದ ಬಳಲಿದರೇನಿದು

ಹಲವು ಯೋಚನೆಯಿಂದ ಬಳಲಿದರೇನಿದು
ಸುಲಭದಿ ಸದ್ಗುರುಸೇವೆಯೊಳಿರದೆ ||ಪ||

ತಿಳಿದು ಪರಮ ಜೀವರೊಂದುಗೂಡಿಸಿ ತತ್ವ-
ಗಳ ಅರಿತು ಮಾಯಾ ಅಳಿಯೆ ಮುರಿಯದೆ ||೧||

ನರಜನ್ಮ ಸ್ಥಿರವೆಂದು ಜರೆಮರಣದೊಳು ನೊಂದು
ಮರಳಿ ಮರಳಿ ಭವಕೆ ಬರಬಹುದೆ ||೨||

ಧರೆಯೊಳುದಿದಿ ಧರ್ಮ ಗಳಸದೆ ನಾರಿಗೆ
ಮರುಳುಗೊಂಡು ಹರಣ ಚರಣ ಸ್ಮರಿಸದೆ ||೩||

ಕಾಯಕರಣಂಗಳಾ ನ್ಯಾಯ ತೀರದ ಮುಂಚೆ
ಮಾಯದೊಳುಬಿದ್ದು ಹರಿದಾಡಗೊಡದೆ ||೪||

ಮಾಯ ಬಲಿದು ಭಕ್ತಿಭಾವದೊಳು ಶಿಶುನಾಳ
ದೇವನೊಲಿಸಿಕೊಂಡು ಮುಕ್ತಿ ಪಡೆಯದೆ ||೫||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾರಿ
Next post ನೀರೆಂದರೆ

ಸಣ್ಣ ಕತೆ

  • ತಾಯಿ-ಬಂಜೆ

    "ಅಯ್ಯೋ! ಅಮ್ಮ!... ನೋವು... ನೋವು... ಸಂಕಟ.... ಅಮ್ಮ!-" ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…