ಗಜಲ್

ಕೋಟಿ ದೀಪಗಳ ಹಚ್ಚಿಟ್ಟರೇನು?
ಒಳಗಿನ ಅಂಧಕಾರ ನೀಗಲಿಲ್ಲ!
*

ಎಷ್ಟೂದ್ದ ಪದವಿ, ಪ್ರಶಸ್ತಿ ಗಳಿಸಿದರೇನು?
ಒಳಗಿನ ತಿಳುವಳಿಕೆ ವಿಸ್ತರಿಸಲಿಲ್ಲ!
*

ಎಷ್ಟೊಂದು ದೇಶ, ವಿದೇಶಗಳ ಸುತ್ತಿದರೇನು?
ತನ್ನ ತಾನು ಅರಿತಿಲ್ಲ…!
*

ಮಣಗಟ್ಟಲೆ… ಭಾಷಣ ಮಾಡಿದರೇನು?
ಮನವ ಗೆದ್ದರಿಲ್ಲ!
*

ಕೋಟಿ, ಕೋಟಿ, ಹಣವಿದ್ದರೇನು?
ಗುಣವಿದ್ದವರಿಲ್ಲ!
*

ನೂರು ವರುಶ ಬದುಕಿದರೇನು?
ಊರಿಗೆ ಉಪಕಾರಿಯಾಗಿಲ್ಲದಿರೆ!
*

ವರ್ಷ, ವರ್ಷ, ಹರ್ಷದ ದೀಪಾವಳಿ ಬಂದರೇನು?
ಮನೆ-ಮನಗಳ, ಕತ್ತಲು ನೀಗಲೇ ಇಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರ್‍ಲಿ ಟು ಬೆಡ್ – ಅರ್‍ಲಿ ಟು ರೈಸ್
Next post ನಮ್ಮೂರ ಹೋಳಿ ಹಾಡು – ೧

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

cheap jordans|wholesale air max|wholesale jordans|wholesale jewelry|wholesale jerseys