ಮೂಕನಾಗಿರಬೇಕೋ ಜಗದೊಳು

ಮೂಕನಾಗಿರಬೇಕೋ ಜಗದೊಳು
ಜೋಕ್ಯಾಗಿರಬೇಕೋ ||ಪ||
ಕಾಕು ಕುಹಕರ ಸಂಗ ನೂಕಿರಬೇಕೋ
ಲೋಕೇಶನೊಳಗೇಕಾಗಿರಬೇಕೋ ||ಅ.ಪ||

ಕಚ್ಚುವ ನಾಯಿಯಂತೆ ಬೊಗಳ್ವರೋ
ಹುಚ್ಚರಂದದೊಳಿಹರೊ ಎಚ್ಚರಿಲ್ಲದವರೋ
ಲುಚ್ಚೇರು ನಾಚಿಕಿ ತೊರದಿಹರೋ
ಮುಚ್ಚಿದಾ ಸುದ್ದಿಯ ಬಚ್ಚಿಡದಂಥಾ
ಕುತ್ಸಿತ ಮನುಜರನಗಲಿರಬೇಕೋ ||೧||

ಲೋಕನುಡಿಯ ಮಾತಾಡುವರೋ
ಕುಹಕ ಬುದ್ಧಿಯ ಜನರೋ
ತಾಕುತಗಲು ನುಡಿಯನಾಡ್ವರೋ
ತೂಕನರಿಯದವರೋ
ಸೂಕರ ಮನುಜರ ಸಂಗತಿ ಹಿಂಗಿಸಿ
ಶ್ರೀಕರ ಬ್ರಹ್ಮ ತಾನಾಗಿರಬೇಕೋ ||೨||

ನಡಿನುಡಿಗೆ ನುಡಿಯಬೇಕೋ ಗುರುವಿನಾ
ಅಡಿಯ ಪಿಡಿಯಬೇಕೋ
ಕಡುಮದದೊಳಿರಬೇಕೋ
ದುರ್ಜನರಾ ನಡತಿಯ ಬಿಡಬೇಕೋ
ಪೊಡವಿಪ ಶಿಷುನಾಳ ಒಡಿಯನ ಕಂಡು
ಗುಡಿಪುರ ಕಲ್ಮನ ಕೂಡಿರಬೇಕು ||೩||

*****

 

ಕೀಲಿಕರಣ : ಎಮ್.ಎನ್.ಎಸ್.ರಾವ್

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಿನಮಾನ ಬಲು ಕೆಟ್ಟವೋ
Next post ನಗೆ ಡಂಗುರ – ೩

ಸಣ್ಣ ಕತೆ