ದುಡ್ಡು ಕೆಟ್ಟದ್ದೊ ಮನುಜಾ

ದುಡ್ಡು ಕೆಟ್ಟದ್ದೊ ಮನುಜಾ ಈ ಲೋಕದಿ
ದುಡ್ಡು ಕೆಟ್ಟದ್ದೊ ಮನುಜಾ ||ಪ||
ಹೆಡ್ಡ ಮೂಢಾತ್ಮನೆ ದೊಡ್ಡ ದೊಡ್ಡವರನು
ಮಡ್ಡು ಇಳಿಸುತ್ತಲೀ ಅಡ್ಡಬೀಳಿಸುವದು ||ಅ.ಪ||

ಹರನ ಪೂಜೆಯ ಕೆಡಿಸಿ ಸದ್ಗುರುವಿನ
ವರಮಂತ್ರವನು ಬಿಡಿಸಿ
ಗುರುಶಿಷ್ಯಭಾವವನರುಹಿ ಲಕ್ಷ್ಮೀಯೆಂಬ
ಕೊರವಿಯು ನರರನು ಅರವುಗೆಡಿಸುವಳು ||೧||

ಆಸೆಯ ಮನಗೊನಿಯು
ಸಂಸಾರವು ಕಸಿನ ಘನತೆನಿಯು
ಭಾಸುರ ಶಿಶುನಾಳಧೀಶ ಸದ್ಗುರುವಿಗೆ
ಆಸೆಯ ಕಲಿಸಲು ಏಸರವಳವ್ವ ಈಕಿ ||೨||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳ ಮತ್ತು ಮನುಷ್ಯ
Next post ಆಂತರ್ಯ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…