ಕೂ ಕೂ ಎನುತಿದೆ ಬೆಳವಾ

ಕೂ ಕೂ ಎನುತಿದೆ ಬೆಳವಾ
ಬಂದು ಹೊಕ್ಕಿತು ಭವವೆಂಬ ದುಃಖದ ಹಳವಾ    ||ಪ||

ಪುರುಷನ ಬುಟ್ಟಿಯೊಳಿಟ್ಟು ಬಹು-
ಹರುಷದಿ ಹಳ್ಳದೋಳ್ ತೇಲಾಕ ಬಿಟ್ಟು            ||೧||

ತನುವೆಂಬ ಗೂಡಿನೋಳಿಟ್ಟು
ತನ್ನ ದೇಹವೆಂಬೋ ಮರದೊಳೂ ಹಾರಾಕ ಬಿಟ್ಟು        ||೨||

ಆನಂದದಲಿ ನಾವಿರಲು
ಸ್ವಾನಂದದಿ ಪಕ್ಕದೊಳು ಕೆದುರುತಲಿರಲು        ||೩||

ಭುವನದೊಳಗೆ ನಿಂತಿರಲು ದೇವಾ
ಶಿಶುನಾಳಧೀಶಾ ಗೋವಿಂದನ ವರವು         ||೪||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪದ ಕಂಬ – ೨ (ಜೀವನ ಚಿತ್ರ)
Next post ನಗೆ ಡಂಗುರ – ೩೧

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…