ಒಂಟೆಯ ಮೇಲಿನ ಶಾಹಣೆ

ಒಂಟೆಯ ಮೇಲಿನ ಶಾಹಣೆ

ಚಿತ್ರ: ಪಿಕ್ಸಾಬೇ

ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು.

ಚಿಕ್ಕದಾದ ಹಂಡೆಯ ಬಾಯಿಗಿಂತ ದೊಡ್ಡದಾದ ಕೋಣನ ತಲೆಯು ಹಂಡೆಯಲ್ಲಿ ಸಿಕ್ಕುಕೊಂಡಿತು. ಜಗ್ಗಾಡಿತು. ಎಳೆದಾಡಿತು. ಬಗೆ ಹರಿಯಲಿಲ್ಲ. ಮನೆಯವರು; ಓಡಿಬಂದರು ಒಬ್ಬಿಬ್ಬರು ಹಂಡೆ ಹಿಡಿದರು. ಒಬ್ಬಿಬ್ಬರು ಕೋಣಕರುವನ್ನು ಹಿಡಿದೆಳೆದರು. ಏನುಮಾಡಿದರೂ ಕೋಣನ ತಲೆ ಹಂಡೆಯಿಂದ ಹೊರಬರಲಿಲ್ಲ. ಕೊನೆಗೆ ಊರಲ್ಲಿರುವ ಶಾಹಣೆನನ್ನು ಕರೆಯಕಳಿಸಿದರು.

ಬಹಳ ಶಾಹಣೆ ಎಂದು ಆತನು ಆ ಭಾಗದ ಹಳ್ಳಿಗಳಿಗೆಲ್ಲ ಹೆಸರಾಗಿದ್ದನು. ಎಲ್ಲಿಗೆ ಹೋದರೂ ಆತನು ಒಂಟೆಯ ಮೇಲೆ ಕುಳಿತುಕೊಂಡೇ ಹೋಗುತ್ತಿದ್ದನು. ಹೋದಲ್ಲಿ ಅವನು ಯುಕ್ತಿ ಹೇಳುವಾಗ ಸಹ ಒಂಟೆಯ ಮೇಲಿಂದ ಕೆಳಗಿಳಿಯುತ್ತಿದ್ದಿಲ್ಲ. ಒಂಟೆಯ ಮೇಲೆ ಕುಳಿತುಕೊಂಡೇ ಬುದ್ದಿ ಹೇಳುತ್ತಿದ್ದುದರಿಂದ ಅವನನ್ನು ಒಂಟೆಯ ಮೇಲಿನ ಶಾಹಣೆ ಎಂದು ಕರೆಯುತ್ತಿದ್ದರು.

ಆ ಒಂಟೆಯಮೇಲಿನ ಶಾಹಣೆ ಬಂದನು. ಆದರೆ ಆ ರೈತನ ಮನೆಯ ಒಳಗೆ ಬರುವುದು ಹೇಗೆ ? ಆತನಂತೂ ಒಂಟೆಯ ಮೇಲೆ ಕುಳಿತುಕೊಂಡೇ ಬರತಕ್ಕವನು.

ಮನೆಯೊಳಗೆ ಬರುವದಕ್ಕೆ ಯುಕ್ತಿಯನ್ನೂ ಅವನೇ ಹೇಳಿಕೊಟ್ಟನು. ಆ ಪ್ರಕಾರ ತಲೆಬಾಗಿಲನ್ನು ಕಿತ್ತಿಡಬೇಕಾಯಿತು. ಆಗ ಒಳಗೆ ಬಂದು ಇದ್ದ ತೊಡಕನ್ನು ನಿರೀಕ್ಷಿಸಿದನು – “ಇದೇನು ಮಹಾ” ಎಂದನು.

ಕೋಣನ ಕುತ್ತಿಗೆ ಕಡೆಯಲು ಹೇಳಿದನು.
ಹಂಡೆಯನ್ನು ಒಡೆಯಲು ಸಲಹೆಯಿತ್ತನು.

ಅವನು ಹೇಳಿದಂತೆ ಎಲ್ಲವೂ ನಡೆದುಹೋಯಿತು. “ನೋಡಿರಿ, ಕೋಣನ ರುಂಡವು ಹಂಡೆಯಿಂದ ಹೊರಟಿತಲ್ಲವೇ” ಎಂದು ನುಡಿದು. ಒಂಟೆಯನ್ನು ಹೊರಳಿಸಿಕೊಂಡು ತನ್ನ ಮನೆಯ ಹಾದಿ ಹಿಡಿದನು. ನೆರೆದ ಜನರು ಬೆಪ್ಪಾಗಿ ನಿಂತರು. ಒಂಟೆಯ ಮೇಲಿನ ಶಾಹಣೇನ ಯುಕ್ತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ಲುಟೋಯ್
Next post ಮಿಂಚುಳ್ಳಿ ಬೆಳಕಿಂಡಿ – ೫೫

ಸಣ್ಣ ಕತೆ

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…