ಹವಳ ದ್ವೀಪ

ದ್ವೀಪದ ಸುತ್ತಲೂ
ನೀಲ ಕಡಲು
ಹವಳದ ಒಡಲು
ಮುಚ್ಚಿಟ್ಟ ಲೋಕ
ಬಿಚ್ಚಿಡಲಾರದ ನಾಕ
ಆಳದಲ್ಲೆಲ್ಲೋ ಬಿಸುಪು
ಕಣ್ತಪ್ಪಿಸುವ ಹೊಳಪು
ದೂರ ಬಹುದೂರ
ದ್ವೀಪದ ಮಡಿಲು
ಈಜಿದಷ್ಟು ದಣಿವು
ಗುರಿ ತಲುಪಲಾರದ
ಸೆಳವು

ಬೇಕು ಇಂತಿಷ್ಟೆ ಕಸುವು
ಹವಳದ ದಾಹ
ದ್ವೀಪದ ಮೋಹ
ಎಳೆದೊಯ್ಯುತ್ತಿದೆ
ಆಳಕ್ಕಿಳಿಸುತ್ತಿದೆ
ಈಜುವ ಕೈಗೆ ಸೋಲು
ದಾರಿ ಎತ್ತ ಎತ್ತಲೊ
ದ್ವೀಪದ ಸುತ್ತಲೂ
ನೀಲಾ ಕಡಲು
ಕೆಂಪು ಹವಳದ ಕಡಲು
ಅಂದಿಗೂ ಇಂದಿಗೂ
ಮುಗಿಯದ ಸೆಳೆತ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಯತ್ನಗಳು
Next post ಅಸ್ಪೃಶ್ಯರು

ಸಣ್ಣ ಕತೆ

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…