ರಾಮಲಿಂಗಮೂರ್ತಿ ಸದ್ಗುರು

ರಾಮಲಿಂಗಮೂರ್ತಿ ಸದ್ಗುರು
ಸ್ವಾಮಿ ನಿನ್ನ ಕೀರ್ತಿ
ನೇಮದಿ ನಿನ್ನಯ ನಾಮವ ಸ್ಮರಿಸುವೆ
ಆ ಮಹಾ ಶಿಗ್ಗಲಿ ಗ್ರಾಮದೊಳಗೆ….ಶ್ರೀ ||೧||

ಛಂದದಿ ನಾ ಬಂದು
ಈ ಕ್ಷಣ ಸೇವೆಯೊಳಗೆ ನಿಂದು
ಅಂದ ವಚನಗಳ ಸಿದ್ಧಿಗೆ ಹೊಂದಿಸು
ಎಂದೆಂದಿಗೂ ನಿನ್ನ ದ್ವಂದ್ವ ಚರಣ ಗತಿ…ಶ್ರೀ ||೨||

ಶಿಶುನಾಳಪುರಧೀಶ ಉಸುರಿದ
ರಸಿಕರ ಉಲ್ಲಾಸ
ಹಸನಾಗಿ ನಾ ನಿನ್ನ ಅಸಮ ಮಹಿಮೆಯನು
ಉಸುರಲಳವೆ ಕೊಡು ರಸಿಕತನವ….ಶ್ರೀ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಂಬಿದೆ ನಾ ನಿನ್ನ ಶಂಭೋ
Next post ನೀಲಕಂಠನ ದಿವ್ಯ ಆಲಯದೊಳು

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…